ಅಲ್ಲಾಹ್‍ನಿಗೆ ಅರ್ಪಿಸಿದ ಕೋಳಿ ಹಿಂದೂಗಳಿಗೆ ಯಾಕೆ?, ಮುಸ್ಲಿಮರು ವರ್ತನೆ ಸರಿಮಾಡಿಕೊಳ್ಳಬೇಕು: ರಘುಪತಿ ಭಟ್

Public TV
1 Min Read

ಉಡುಪಿ: ಹಲಾಲ್ ಚಿಕನ್ ಹಿಂದೂಗಳು ಬಹಿಷ್ಕಾರ ಮಾಡಿದ್ದು ತಪ್ಪಲ್ಲ. ಹಿಂದೂಗಳ ಈ ನಡೆಯಲ್ಲಿ ಯಾವುದೇ ತಪ್ಪಿಲ್ಲ. ಹಲಾಲ್ ಅಂಗಡಿಯನ್ನು ಬಂದ್ ಮಾಡಿ ಎಂದು ಹಿಂದೂಗಳು ಒತ್ತಾಯ ಮಾಡಿಲ್ಲ. ಅಲ್ಲಾಹ್‍ನಿಗೆ ಅರ್ಪಿಸಿದ ಕೋಳಿ ಹಿಂದೂಗಳಿಗೆ ಯಾಕೆ ಎಂದು ಶಾಸಕ ರಘುಪತಿ ಭಟ್ ಪ್ರಶ್ನಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲಾಲ್ ಮಾಂಸ ತಿನ್ನಬೇಡಿ ಎಂಬ ಕರೆ ಸರಿಯಾಗಿದೆ. ಮುಸಲ್ಮಾನರು ಕೋಳಿಯನ್ನು ಕಟ್ ಮಾಡುವ ರೀತಿ, ಅಲ್ಲಾಹ್‍ನಿಕೆ ಸಮರ್ಪಣೆ ಮಾಡುವುದು ಇಸ್ಲಾಂ ಪದ್ಧತಿಯಂತೆ ನಡೆಯುತ್ತದೆ. ಹಿಂದೂ ಸಂಘಟನೆಗಳು, ಹಿಂದೂ ಸಮಾಜ ಜನಜಾಗೃತಿ ಮಾಡಿಸುವುದು ತಪ್ಪಲ್ಲ ಸರಿಯಾಗಿಯೇ ಇದೆ ಎಂದಿದ್ದಾರೆ. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ತಡೆ ಇದೆ. ಮುಸಲ್ಮಾನ ಸಮಾಜ ಸ್ವಲ್ಪ ಸುಧಾರಣೆಯನ್ನು ಹೊಂದಬೇಕಾಗುತ್ತದೆ. ನಾವು ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದ್ದೇವೆ ಎಂದು ಅರಿತುಕೊಳ್ಳಬೇಕಾಗುತ್ತದೆ. ಸಮಾನತೆಯ ದೃಷ್ಟಿಯಿಂದ ಸಾರ್ವಜನಿಕವಾಗಿ ವರ್ತಿಸಬೇಕು. ಮುಸಲ್ಮಾನರು ಧರ್ಮಾಚರಣೆ ಮಾಡುವುದಕ್ಕೆ ಯಾವುದೇ ಆಕ್ಷೇಪಗಳು ಇಲ್ಲ. ಶಿಸ್ತು, ಸಮವಸ್ತ್ರ, ಸಮಾನತೆಯನ್ನು ಎಲ್ಲರೂ ಪಾಲಿಸಬೇಕು. ಇದನ್ನೂ ಓದಿ: ಕರ್ನಾಟಕದಲ್ಲಿ ಇಸ್ಲಾಂ ಸ್ಲೀಪರ್ ಸೆಲ್ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

ಭಾರತದ ಪ್ರಜೆಯಾಗಿ ಅವರ ಕರ್ತವ್ಯ ಏನು ಎಂದು ಮೊದಲು ತಿಳಿದುಕೊಳ್ಳಬೇಕು. ಮುಸಲ್ಮಾನರು ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ. ಕರ್ತವ್ಯಗಳ ಬಗ್ಗೆ ಮಾತನಾಡುವುದಿಲ್ಲ. ಮುಸ್ಲಿಂಮರು ಕರ್ತವ್ಯವನ್ನು ಮರೆತಿರುವುದರಿಂದ ಹಿಂದೂ ಸಮಾಜ ಜಾಗೃತವಾಗಿದೆ. ಹಿಂದೂ ಧರ್ಮೀಯರು ಯಾವಾಗಲೂ ಸಹಿಷ್ಣುಗಳು. ನಮ್ಮದು ವಸುದೈವ ಕುಟುಂಬಕಂ ಎಂದು ಹೇಳಿಕೊಂಡು ಬಂದಿರುವ ಸಮಾಜ. ಇತ್ತೀಚೆಗೆ ಅತಿರೇಕವಾಗಿ ನಡವಳಿಕೆಗಳು ಕಂಡ ಬಂದಾಗ ಈ ತರದ ಬೆಳವಣಿಗೆಗಳಾಗಿವೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *