ನವದೆಹಲಿ: ಡೊನಾಲ್ಡ್ ಟ್ರಂಪ್ ಸೂಚಿಸಿದ 5 ಗಂಟೆಗಳ ಒಳಗಾಗಿ ಪಾಕ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಧಾನಿ ಮೋದಿ ನಿಲ್ಲಿಸಿದರು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಟೀಕಿಸಿದ್ದಾರೆ.
ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ರಂಪ್ ಅವರ 24 ಗಂಟೆಗಳ ಅಂತಿಮ ಗಡುವು ನೀಡಿದಾಗ, ಐದು ಗಂಟೆಗಳಲ್ಲಿ ಪ್ರಧಾನಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಿದ್ದಾರೆಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್
ರಾಹುಲ್ ಗಾಂಧಿಯವರ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ನಾಯಕಿ ಮತ್ತು ಮುಂಬೈ ಬಿಜೆಪಿಯ ಸಹ-ಸಂಚಾಲಕಿ ಪಲ್ಲವಿ ಸಿಟಿ, ಮೋದಿಜಿ ಟ್ರಂಪ್ ಅವರ ಮಾತು ಕೇಳಿ ಆಪರೇಷನ್ ಸಿಂಧೂರ್ ಅನ್ನು ನಿಲ್ಲಿಸಿದ್ದರೆ, ಟ್ರಂಪ್ ಭಾರತದ ಮೇಲೆ ಸುಂಕ ವಿಧಿಸಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, ರಾಹುಲ್ ಗಾಂಧಿ ಸ್ಥಳೀಯ ಗೂಂಡಾಗಳಂತೆ ಮಾತನಾಡುತ್ತಾರೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ಕುಟುಕಿದ್ದಾರೆ.
ಶ್ವೇತಭವನದಲ್ಲಿ ನಡೆದ ಕ್ಯಾಬಿನೆಟ್ ಸಭೆಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡರು. ಮೋದಿ ಅದ್ಭುತ ವ್ಯಕ್ತಿ ಎಂದು ಬಣ್ಣಿಸಿದ್ದರು. ಇದನ್ನೂ ಓದಿ: ಒಂದಲ್ಲ, 4 ಬಾರಿ ಟ್ರಂಪ್ ಕರೆ ಮಾಡಿದ್ರೂ ಉತ್ತರಿಸದ ಮೋದಿ!
ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಳೆಗಾಲದ ಅಧಿವೇಶನದಲ್ಲಿ, ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದೆ. ಯುದ್ಧ ನಿಲ್ಲಿಸಿದ್ದು ನಾನೇ ಎಂಬ ಟ್ರಂಪ್ ಅವರ ನಿರಂತರ ಹೇಳಿಕೆಗಳನ್ನು ಈಗಾಗಲೇ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.