ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ ನಕಲಿ ಗಾಂಧಿಗಳಿಗೆ ED ನೋಟಿಸ್ ಕೊಟ್ಟಾಗ ಬೀದಿಗೆ ಬಂದಿದೆ: ಬಿಜೆಪಿ

Public TV
3 Min Read

ಬೆಂಗಳೂರು: ದೇಶಕ್ಕಾಗಿ ಮಡಿವ ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಕಾಂಗ್ರೆಸ್ ಬೀದಿಗೆ ಬರಲಿಲ್ಲ. ಆದರೆ ನಕಲಿ ಗಾಂಧಿಗಳಿಗೆ ಇಡಿ ನೋಟಿಸ್ ನೀಡಿದರೆ ಕಾಂಗ್ರೆಸ್ ರಸ್ತೆಗೆ ಬಂದು ನಿಂತಿದೆ ಎಂದು ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಟ್ವೀಟ್ ಮೂಲಕ ಲೇವಡಿ ಮಾಡಿದೆ.

ಟ್ವೀಟ್‍ನಲ್ಲಿ ಏನಿದೆ?
ದೇಶಕ್ಕಾಗಿ ಮಡಿವ ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಕಾಂಗ್ರೆಸ್ ಬೀದಿಗೆ ಬರಲಿಲ್ಲ. ಆದರೆ ನಕಲಿ ಗಾಂಧಿಗಳಿಗೆ ಇಡಿ ನೋಟಿಸ್ ನೀಡಿದರೆ ಕಾಂಗ್ರೆಸ್ ರಸ್ತೆಗೆ ಬಂದು ನಿಂತಿದೆ. ಇದು ಸಂವಿಧಾನಕ್ಕೆಸಗುತ್ತಿರುವ ಅಪಚಾರವಲ್ಲವೇ? ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನಕಲಿ ಗಾಂಧಿ ಕುಟುಂಬದ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ತಪ್ಪು ಮಾಡದೇ ಇದ್ದರೆ ಭಯವೇಕೆ? ಸಹಾನುಭೂತಿ ಗಿಟ್ಟಿಸುವುದಕ್ಕಾಗಿ ಕಾಂಗ್ರೆಸ್ ಪ್ರತಿಭಟನೆಯ ನಾಟಕ ಹೆಣೆಯುತ್ತಿದೆ. ಇದೊಂದು ಯೋಜಿತ ಸಂಚು ಅಷ್ಟೇ! ತಪ್ಪು ಮಾಡದವರು ಯಾರು ಎಂದು ಒಪ್ಪಿಕೊಂಡು ತನಿಖೆ ಎದುರಿಸುವ ಮುಕ್ತ ಮನಸ್ಸು ನಕಲಿ ಗಾಂಧಿ ಕುಟುಂಬಕ್ಕಿಲ್ಲ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ರಾಹುಲ್ ಗಾಂಧಿಗೆ ಸಂಕಷ್ಟ – ಇಂದು 2 ಹಂತಗಳಲ್ಲಿ ಇ.ಡಿ ಡ್ರಿಲ್

ತಪ್ಪು ಮಾಡದೇ ಇದ್ದರೆ ತನಿಖೆಯ ಅಗ್ನಿ ಪರೀಕ್ಷೆ ಎದುರಿಸಲು ಭಯವೇಕೆ? ಅಷ್ಟಕ್ಕೂ ತನಿಖೆ ಬೇಡ ಎನ್ನಲು, ನಕಲಿ ಗಾಂಧಿ ಕುಟುಂಬವನ್ನು ಹೊರಗಿಟ್ಟು ಭಾರತೀಯ ದಂಡ ಸಂಹಿತೆ ರಚಿಸಲಾಗಿದೆಯೇ? ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಗಾಂಧಿ ಕುಟುಂಬ ಈಗ “ಅನುಕಂಪ” ಗಿಟ್ಟಿಸುವ ನಾಟಕವಾಡುತ್ತಿದೆ. ತಾನು ಕಳ್ಳ ಪರರ ನಂಬೆ ಎಂಬ ಧೋರಣೆಯೇ ಕಾಂಗ್ರೆಸ್ ಅಸ್ಮಿತೆ. ನಕಲಿ ಗಾಂಧಿ ಮನೆತನದಿಂದ, ನಕಲಿ ಗಾಂಧಿ ಮನೆತನಕ್ಕಾಗಿ, ನಕಲಿ ಗಾಂಧಿ ಮನೆತನಕ್ಕೋಸ್ಕರ, ಇದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ! ನಕಲಿ ಗಾಂಧಿ ಕುಟುಂಬದ ಸದಸ್ಯರಿಗೆ ಇಡಿ ನೋಟಿಸ್ ಜಾರಿಯಾಗುತ್ತಿದ್ದಂತೆ ದೇಶಾದ್ಯಂತ ಅಶಾಂತಿ ಸೃಷ್ಟಿ ಮಾಡಲಾಗುತ್ತಿದೆ. ಇ.ಡಿ ಕಚೇರಿ ಎದುರು ಪ್ರತಿಭಟನೆಯ ಕರೆಯ ಹಿಂದೆ ದೇಶ ವಿರೋಧಿ ಸಂಚು ಅಡಗಿದೆ. ಉತ್ತರದ ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಹೋರಾಟವನ್ನು ಕಾಂಗ್ರೆಸ್ ಕರ್ನಾಟಕಕ್ಕೆ ಆಹ್ವಾನಿಸುತ್ತಿದೆ! ಕೇವಲ ಒಂದು ಇ.ಡಿ ನೋಟಿಸ್‍ಗಾಗಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಡಿಕೆಶಿ ಅವರೇ, ನೀವೇನು ಸೊಬಗ ಅಂದುಕೊಂಡಿದ್ದೀರಾ? ಒಂದೂವರೆ ತಿಂಗಳಿಗೂ ಹೆಚ್ಚು ತಿಹಾರ್ ಜೈಲಿನಲ್ಲಿ ಕಂಬಿ ಎಣಿಸಿದ್ದು ನ್ಯಾಷನಲ್ ಹೆರಾಲ್ಡ್ ರೀತಿಯ ಪ್ರಕರಣದಲ್ಲಿಯೇ ಎಂಬುದನ್ನೂ ಮರೆತಿರಾ? ತಮ್ಮ ಪ್ರತಿ ಭಾಷಣದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ‘ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ’ ಎಂಬುದನ್ನು ಪ್ರಸ್ತಾಪಿಸುತ್ತಾರೆ. ಅದೇ ಡಿಕೆಶಿ ಇಂದು ದೇಶದ ಸಾಂವಿಧಾನಿಕ ಮಾನ್ಯತೆ ಇರುವ ಸಂಸ್ಥೆ ನಕಲಿ ಗಾಂಧಿ ಕುಟುಂಬಕ್ಕೆ ನೀಡಿದ ನೋಟಿಸ್‍ಗೆ ನಕಲಿ ಗಾಂಧಿಗಳ ಜಪ ಮಾಡುತ್ತಿರುವುದು ವಿಪರ್ಯಾಸ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಶರದ್ ಪವಾರ್ ಒಮ್ಮತದ ಅಭ್ಯರ್ಥಿ?

ಬಾಲ ಮುದುರಿಕೊಂಡು ಕುಳಿತಿದ್ದ ನಗರ ನಕ್ಸಲರು, ಶಾಂತಿದೂತರು, ಸಿಎಎ ವಿರೋಧಿ ಹೋರಾಟಗಾರರು ಈಗ ಒಮ್ಮೆಲೇ ಎದ್ದು ನಿಂತಿದ್ದಾರೆ. ಇ.ಡಿ ನೋಟಿಸ್ ಬಳಿಕ ಈ ಘಟನೆ ನಡೆಯುತ್ತಿದೆ. ಹಾಗಾದರೆ ಇದು ಕಾಂಗ್ರೆಸ್ ಪ್ರೇರಿತ ರಾಷ್ಟ್ರ ವಿರೋಧಿ ಸಂಚಲ್ಲವೇ? ಮಾತೆತ್ತಿದರೆ ತ್ಯಾಗ-ಬಲಿದಾನದ ಕುಟುಂಬ ಎಂದು ಹೇಳುವ ಕಾಂಗ್ರೆಸ್ ನಾಯಕರೇ, ನಕಲಿ ಗಾಂಧಿಗಳ ವಂಶಸ್ಥರ ಅಕ್ರಮ ಆಸ್ತಿ ದೇಶಸೇವೆಗಾಗಿ ಬರೆದುಕೊಡಲಿ. ಅಕ್ರಮಗಳ ಹಣ ದೇಶಸೇವೆಗಾಗಿ ಮೀಸಲಿಟ್ಟಿದ್ದರೆ, ಅಕ್ರಮ ಹಣಗಳಿಕೆಯಲ್ಲಿ ಇಡಿ ಮುಂದೆ ನಿಲ್ಲಬೇಕಾದ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಸಚಿವರಾದ ಅಶ್ವಥ್ ನಾರಾಯಣ, ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ಹಾಲಪ್ಪಾ ಆಚಾರ್, ಶ್ರೀರಾಮುಲು, ಸಿಸಿ ಪಾಟೀಲ್, ಬಿ.ಸಿ ನಾಗೇಶ್, ಸುನಿಲ್‌ ಕುಮಾರ್ ಸೇರಿದಂತೆ ಹಲವು ಸಚಿವರು ಟ್ವೀಟ್ ಮೂಲಕ ಕಾಂಗ್ರೆಸ್‍ಗೆ ತಿರುಗೇಟು ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *