ದೇಶದಲ್ಲಿ ಹಣದುಬ್ಬರ ಮತ್ತಷ್ಟು ಏರಿಕೆ: ರಾಹುಲ್ ಗಾಂಧಿ ಎಚ್ಚರಿಕೆ

Public TV
1 Min Read

ನವದೆಹಲಿ: ಹಣದುಬ್ಬರವು ಮತ್ತಷ್ಟುಕ್ಕೂ ಏರಿಕೆಯಾಗಲಿದ್ದು, ದೇಶದ ಜನರನ್ನು ರಕ್ಷಿಸಲು ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಣದುಬ್ಬರವು ಎಲ್ಲಾ ಭಾರತೀಯರ ಮೇಲಿನ ತೆರಿಗೆಯಾಗಿದೆ. ರಷ್ಯಾ- ಉಕ್ರೇನ್ ಯದ್ಧ ಪ್ರಾರಂಭವಾಗುವ ಮೊದಲೇ ದಾಖಲೆಯ ಮಟ್ಟದಲ್ಲಿ ಬೆಲೆ ಏರಿಕೆಯಾಗಿತ್ತು. ಇದರಿಂದಾಗಿ ಬಡವರು ಹಾಗೂ ಮಧ್ಯಮ ವರ್ಗದವರು ಸಾಕಷ್ಟು ಸಂಕಷ್ಟ ಎದುರಿಸಿದ್ದರು ಎಂದು ತಿಳಿಸಿದರು.

ಈಗ ಹಣದುಬ್ಬರ ಮತ್ತಷ್ಟು ಏರಿಕೆಯಾಗಲಿದ್ದು, ಕಚ್ಚಾತೈಲ 1ಬ್ಯಾರಲ್‍ಗೆ 100 ಡಾಲರ್(7594 ರೂ.), ಆಹಾರದ ಬೆಲೆಗಳು ಶೇ.22 ಏರಿಕೆಯಾಗುವ ನಿರೀಕ್ಷೆಯಿದೆ. ಕೊರೊನಾದಿಂದಾಗಿ ಜಾಗತಿಕ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸುತ್ತಿದೆ. ಕೇಂದ್ರ ಸರ್ಕಾರವು ಈಗ ಕಾರ್ಯ ನಿರ್ವಹಿಸಿ ಜನರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ದೇಗುಲದ ಮೇಲೆ ದಾಳಿ

ಸೋಮವಾರ ಬಿಡುಗಡೆಯಾದ ಸರ್ಕಾರದ ಅಂಕಿಅಂಶಗಳ ಪ್ರಕಾರ ಕಚ್ಚಾ ತೈಲ ಹಾಗೂ ಆಹಾರೇತರ ವಸ್ತುಗಳ ಬೆಲೆ ಶೇ. 13.11ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಸೋಮವಾರ ಬೆಳಗ್ಗೆ 9.30ಕ್ಕೆ ಮೃತದೇಹ ಮನೆಗೆ ಬರಲಿದೆ: ನವೀನ್ ತಂದೆ

ಫೆಬ್ರವರಿ 24 ರಂದು ಪ್ರಾರಂಭವಾದ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನಂತರ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಬೆಲೆ ಏರಿಕೆಯು ಸಗಟು ಬೆಲೆ ಸೂಚ್ಯಂಕದ ಮೇಲೆ ಒತ್ತಡವನ್ನು ಉಂಟುಮಾಡಿದೆ.

Share This Article
Leave a Comment

Leave a Reply

Your email address will not be published. Required fields are marked *