ಅಮೇಥಿಯಿಂದ ರಾಹುಲ್, ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧೆ

Public TV
1 Min Read

ನವದೆಹಲಿ: ಕಾಂಗ್ರೆಸ್  (Congress) ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಯುಪಿ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಅಜಯ್ ರೈ ಶುಕ್ರವಾರ ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಸ್ಪರ್ಧೆ ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೆ ನೇರ ಹಣಾಹಣಿಗೆ ಕಾರಣವಾಗುವುದರಿಂದ ಕೂತುಹಲಕ್ಕೆ ಕಾರಣವಾಗಲಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಸುಮಾರು 55,000 ಮತಗಳ ಅಂತರದಿಂದ ರಾಹುಲ್ ಅವರನ್ನು ಸೋಲಿಸಿದ್ದರು. ವಯನಾಡ್ ಲೋಕಸಭಾ ಕ್ಷೇತ್ರದಿಂದ ಸಹ ಸ್ಪರ್ಧಿಸಿದ್ದ ರಾಹುಲ್ ಅಲ್ಲಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ಲೋಕಸಮರಕ್ಕೆ ಆಪರೇಷನ್ ಹಸ್ತ – ಕರಾವಳಿಯಿಂದ ಸ್ಪರ್ಧಿಸ್ತಾರಾ ಬಿಜೆಪಿಯ ಆ ಸಂಸದ?

ಅಲ್ಲದೇ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ನಿರ್ಧರಿಸಿದರೆ, ಅವರ ಗೆಲುವಿಗೆ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸುತ್ತಾರೆ ಎಂದು ಇದೇ ವೇಳೆ ಅಜಯ್ ರೈ ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಪ್ರಿಯಾಂಕಾ ಗಾಂಧಿ (Priyanka Gandhi) ವಾರಣಾಸಿಯಿಂದ ಪ್ರಧಾನಿ ಮೋದಿಗೆ ಸವಾಲೆಸೆಯಬಹುದು ಎಂದು ಊಹಿಸಲಾಗಿತ್ತು. ಆದರೆ ಕಾಂಗ್ರೆಸ್ ಕೊನೆಯ ಕ್ಷಣದಲ್ಲಿ ಅಜಯ್ ರೈ ಅವರನ್ನು ಕ್ಷೇತ್ರದಿಂದ ಕಣಕ್ಕೆ ಇಳಿಸಿತ್ತು. 2014ರ ಲೋಕಸಭೆ ಚುನಾವಣೆಯಲ್ಲಿಯೂ ಅಜಯ್ ರೈ ವಾರಣಾಸಿಯಿಂದ ಸ್ಪರ್ಧಿಸಿ ನರೇಂದ್ರ ಮೋದಿ ವಿರುದ್ಧ ಸೋತಿದ್ದರು. ಇದನ್ನೂ ಓದಿ: ನಮ್ಮ ಸಿದ್ಧಾಂತ ಒಪ್ಪಿ ಬರುವವರನ್ನ ನಾವು ಸ್ವಾಗತ ಮಾಡುತ್ತೇವೆ: ಜಿ.ಪರಮೇಶ್ವರ್‌

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್