ವಿಮಾನದ ಎಂಜಿನ್ ದೋಷ : ದೆಹಲಿಗೆ ಮರಳಿದ ರಾಹುಲ್ – ವಿಡಿಯೋ

Public TV
1 Min Read

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವಿಮಾನದ ಎಂಜಿನ್‍ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿಗೆ ಮರಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಬಿಹಾರ, ಒಡಿಶಾ ಮತ್ತು ಮಹಾರಾಷ್ಟ್ರದಲ್ಲಿ ನಡೆಯುವ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಬೇಕಿತ್ತು. ಆದರೆ ಪಾಟ್ನಾಕ್ಕೆ ಬರುವಾಗ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಪರಿಣಾಮ ಸಭೆಗೆ ಬರುವುದು ತಡವಾಗುತ್ತದೆ. ಈ ಅನಾನುಕೂಲತೆಗಾಗಿ ಕ್ಷಮಿಸಿ ಎಂದು ಬರೆದುಕೊಂಡಿದ್ದಾರೆ.

ಟ್ವೀಟ್ ನಲ್ಲಿ ಏನಿದೆ?:
ಪಾಟ್ನಾದಲ್ಲಿ ವಿಮಾನದ ಇಂಜಿನ್ ನಲ್ಲಿ ದೋಷ ಕಂಡುಬಂದಿದೆ. ಹೀಗಾಗಿ ನಾವು ದೆಹಲಿಗೆ ಮರಳುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಸಮಸ್ತಿಪುರ್ (ಬಿಹಾರ), ಬಾಲಸೋರ್ (ಒಡಿಶಾ) ಮತ್ತು ಸಂಗಮನರ್ (ಮಹಾರಾಷ್ಟ್ರ) ಪ್ರಚಾರ ಸಭೆಗೆ ಬರುವುದು ತಡವಾಗುತ್ತದೆ. ಈ ಅನಾನುಕೂಲತೆಗಾಗಿ ನಮ್ಮನ್ನು ಕ್ಷಮಿಸಿ ಎಂದು ಹೇಳಿ ವಿಮಾನ ಎಂಜಿನ್ ವಿಡಿಯೋವನ್ನು ಪ್ರಕಟಿಸಿದ್ದಾರೆ.

ರಾಹುಲ್ ಟ್ವೀಟ್ ಮಾಡಿದ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ತನಿಖೆ ಆರಂಭಿಸಿದೆ.

ಕಳೆದ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಬರುತ್ತಿದ್ದ ರಾಹುಲ್ ಗಾಂಧಿ ಅವರ ವಿಮಾನ ಈ ರೀತಿಯಲ್ಲೇ ತೊಂದರೆಗೀಡಾಗಿತ್ತು. ಅವರ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದು 40 ನಿಮಿಷ ವಿಮಾನ ಮೇಲೆ ಹಾರಿರಲಿಲ್ಲ.

Share This Article
Leave a Comment

Leave a Reply

Your email address will not be published. Required fields are marked *