ರಾಹುಲ್‌ಗೆ ಮೊಣಕಾಲು ನೋವು – ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ

Public TV
1 Min Read

ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್‌ ಮಾಜಿ ಅಧ್ಯಕ್ಷ, ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ (Rahul Gandhi) ಕೇರಳದಲ್ಲಿ ಮೊಣಕಾಲು ಸಂಬಂಧಿತ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ (Ayurvedic Treatment) ಪಡೆಯುತ್ತಿದ್ದು, ಭಾನುವಾರ ಅವರು ಡಿಸ್ಚಾರ್ಜ್ ಆಗುವ ನಿರೀಕ್ಷೆಗಳಿವೆ ಎಂದು ಮೂಲಗಳು ಹೇಳಿವೆ.

ಮೊಣಕಾಲು ಸಂಬಂಧಿ ಸಮಸ್ಯೆಗಾಗಿ ರಾಹುಲ್ ಗಾಂಧಿ ಜುಲೈ 21 ರಂದು ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಶಾಸಕ ಎಪಿ ಅನಿಲ್ ಕುಮಾರ್ ರಾಹುಲ್ ಗಾಂಧಿ ಜೊತೆಗಿದ್ದಾರೆ.

ಆಸ್ಪತ್ರೆಯಲ್ಲಿದ್ದಾಗ ಅವರು ಮಲಯಾಳಂನ ಪ್ರಸಿದ್ಧ ಬರಹಗಾರ-ನಿರ್ದೇಶಕ ಎಂಟಿ ವಾಸುದೇವನ್ ನಾಯರ್ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ಅವರಿಗೆ ಪೆನ್ನನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಆಸ್ಪತ್ರೆ ಬಳಿ ಇರುವ ಶ್ರೀ ವಿಶ್ವಂಭರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆಸ್ಪತ್ರೆಯಲ್ಲಿದ್ದಾಗ ಪಿಎಸ್‌ವಿ ನಾಟ್ಯ ಸಂಘವು ಪ್ರದರ್ಶಿಸಿದ ‘ದಕ್ಷಯಜ್ಞ’ ಕಥೆಯನ್ನು ಆಧರಿಸಿದ ಕಥಕ್ಕಳಿ ಪ್ರದರ್ಶನ ವೀಕ್ಷಿಸಿದರು.  ಇದನ್ನೂ ಓದಿ: ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಪ್ರಧಾನಿ ಮೋದಿ ತಯಾರಿ ಏನು?

ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಗಾಂಧಿ ಮಂಗಳವಾರ ಕೇರಳಕ್ಕೆ (Kerala) ಭೇಟಿ ನೀಡಿದ್ದ ಅವರು ಅಲ್ಲಿಯೇ ಮೊಣಕಾಲು ಸಂಬಂಧಿತ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯಲು ಆರಂಭಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಿಂದ ಈ ವರ್ಷದ ಜನವರಿಯವರೆಗೆ ರಾಹುಲ್‌ ಗಾಂಧಿ ಭಾರತ್‌ ಜೋಡೋ (Bharat Jodo Yatra) ಹೆಸರಿನಲ್ಲಿ ಪಾದಯಾತ್ರೆ ನಡೆಸಿದ್ದರು. ಕನ್ಯಾಕುಮಾರಿಯಿಂದ ಆರಂಭಗೊಂಡಿದ್ದ 146 ದಿನಗಳ ಪಾದಯಾತ್ರೆ ಕಾಶ್ಮೀರದ ಶ್ರೀನಗರದಲ್ಲಿ ಕೊನೆಯಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್