ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕನ್ನಡದಲ್ಲಿ ಅಪ್ಪುಗೆ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕ

Public TV
2 Min Read

ನ್ನಡ ಸಿನಿರಂಗ ಮಾತ್ರವಲ್ಲ ಎಲ್ಲ ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸಿ ಎಲ್ಲರನ್ನು ತಮ್ಮತ್ತ ಆಕರ್ಷಿಸಿದ ವ್ಯಕ್ತಿ ಯುವರತ್ನ ಡಾ.ಪುನೀತ್ ರಾಜ್‍ಕುಮಾರ್. ಅವರು ಸಾವನ್ನಪ್ಪಿದಾಗಿನಿಂದ ಅವರ ಮನೆಗೆ ಸೆಲೆಬ್ರಿಟಿಗಳು, ರಾಜಕಾರಣಿಗಳು ಭೇಟಿ ಕೊಟ್ಟು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪುನೀತ್ ನಿವಾಸಕ್ಕೆ ಭೇಟಿ ಕೊಟ್ಟಿದ್ದು, ಅಶ್ವಿನಿ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳಿದ್ದಾರೆ.

ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ರಾತ್ರಿ ಬೆಂಗಳೂರಿಗೆ ಆಗಮಿಸಿದ ರಾಹುಲ್ ಅವರು ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ.  ಇದನ್ನೂ ಓದಿ: ಇಂದು ಶಿವಕುಮಾರ ಶ್ರೀಗಳ 115 ನೇ ಜನ್ಮ ದಿನೋತ್ಸವ – ಪೂಜಾ ಕೈಂಕರ್ಯಗಳು ಆರಂಭ

ರಾಹುಲ್, ಅಪ್ಪು ನಿವಾಸಕ್ಕೆ ಭೇಟಿ ಕೊಡುತ್ತಿದ್ದ ಹಿನ್ನೆಲೆ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಈ ವೇಳೆ ಸುಮಾರು 15ಕ್ಕೂ ಹೆಚ್ಚು ಪೊಲೀಸರು ಅಪ್ಪು ನಿವಾಸದ ಬಳಿ ಇದ್ದರು. ಅಶ್ವಿನಿ ಪುನೀತ್ ರಾಜ್‍ಕುಮಾರ್ ಮತ್ತು ರಾಘಣ್ಣಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದರು. ಈ ವೇಳೆ ರಾಹುಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ವಾಮಿ ಸಾಥ್ ಕೊಟ್ಟಿದ್ದರು.

ರಾಹುಲ್, ಅಪ್ಪು ನಿವಾಸ ಭೇಟಿ ಕೊಟ್ಟಿರುವ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿದ್ದು, ಕನ್ನಡದ ಖ್ಯಾತ ನಟರಾಗಿದ್ದ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು(ಗುರುವಾರ) ಅವರ ಪತ್ನಿ ಅಶ್ವಿನಿ ಮತ್ತು ಕುಟುಂಬವನ್ನು ಭೇಟಿ ಮಾಡಿದೆ. ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ ಎಂದು ಬರೆದುಕೊಂಡಿದ್ದಾರೆ.

ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ ಎಂದು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು

Share This Article
Leave a Comment

Leave a Reply

Your email address will not be published. Required fields are marked *