ಭಾರತ್ ಜೋಡೋ ಯಾತ್ರೆ – ಇಂದು, ನಾಳೆ ಅಂತರರಾಜ್ಯ ಸಂಚಾರಕ್ಕೆ ಬದಲಿ ಮಾರ್ಗ ಬಳಸಿ

Public TV
1 Min Read

ಚಾಮರಾಜನಗರ: ರಾಹುಲ್‌ ಗಾಂಧಿಯವರ ಭಾರತ್ ಜೋಡೋ ಯಾತ್ರೆ(Bharat Jodo Yatra) ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಅಂತರರಾಜ್ಯ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ ಮಡಲಾಗಿದೆ. ಚಾಮರಾಜನಗರ(Chamarajanagar) ಡಿಸಿ ಚಾರುಲತಾ ಸೋಮಲ್ ಅವರು ಮಾರ್ಗ ಬದಲಾಯಿಸಿ ಆದೇಶ ಹೊರಡಿಸಿದ್ದಾರೆ.

ಸಂಚಾರ ಹೇಗೆ?
ಕೇರಳದ ಸುಲ್ತಾನ್ ಬತ್ತೇರಿಯಿಂದ ಮೂಲೆಹೊಳೆ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು ಗುಂಡ್ಲುಪೇಟೆಯ ಕಗ್ಗಳದಹುಂಡಿ ಗ್ರಾಮದ ಕ್ರಾಸ್ ಬಳಿಯಿಂದ ಚೆನ್ನಮಲ್ಲಿಪುರ-ಹೊಂಗಹಳ್ಳಿ-ಮೂಕಹಳ್ಳಿ-ಮುಂಟಿಪುರ-ಬರಗಿ-ದೇಶಿಪುರ-ಆಲತ್ತೂರು ಮಾರ್ಗವಾಗಿ ಮೈಸೂರಿಗೆ ತೆರಳಬೇಕು. ಇದನ್ನೂ ಓದಿ: ಮುಖೇಶ್ ಅಂಬಾನಿಗೆ Z+ ಭದ್ರತೆ

ಕೇರಳದ ಸುಲ್ತಾನ್ ಬತ್ತೇರಿಯಿಂದ ಮೂಲೆಹೊಳೆ ಮಾರ್ಗವಾಗಿ ಊಟಿಗೆ ತೆರಳುವ ವಾಹನಗಳು ಗುಂಡ್ಲುಪೇಟೆಯ ಕಗ್ಗಳದಹುಂಡಿ ಕ್ರಾಸ್ ಬಳಿಯಿಂದ ಬೇರಂಬಾಡಿ-ಬೀಚನಹಳ್ಳಿ-ಲಕ್ಕಿಪುರ-ದೇವರಹಳ್ಳಿ-ಹಂಗಳ ಮಾರ್ಗವಾಗಿ ಊಟಿಗೆ ತೆರಳಬೇಕು.

ಊಟಿ ಕಡೆಯಿಂದ ಮೈಸೂರಿಗೆ ಬರುವ ವಾಹನಗಳು ಹಂಗಳ-ಹಂಗಳಪುರ-ಶಿವಪುರ-ಕೋಡಹಳ್ಳಿ-ಅಣ್ಣೂರು ಕೇರಿ ಮೂಲಕ ಗುಂಡ್ಲುಪೇಟೆ ಕೋಡಹಳ್ಳಿ ಸರ್ಕಲ್ ಬಳಿ ಚಾಮರಾಜನಗರ ರಸ್ತೆ ಮೂಲಕ ಮೈಸೂರಿಗೆ ತೆರಳಬೇಕು.

ಇಂದಿನ ಕಾರ್ಯಕ್ರಮ ಏನು?
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದ ಬಳಿ ಕಾಂಗ್ರೆಸ್(Congress) ರಾಜ್ಯ ನಾಯಕರು ರಾಹುಲ್ ಗಾಂಧಿಗೆ ಸ್ವಾಗತ ಕೋರುತ್ತಾರೆ. ಬಳಿಕ ವೇದಿಕೆ ಕಾರ್ಯಕ್ರಮ ಮುಗಿಸಿ ರಾಹುಲ್ ಗಾಂಧಿ ಅಂಬೇಡ್ಕರ್ ಭವನದಿಂದ ವೀರನಪುರ ಗೇಟ್‌ವರೆಗೂ 4 ಕಿಮೀ ಪಾದಯಾತ್ರೆ ನಡೆಸಲಿದ್ದಾರೆ.

ಗುಂಡ್ಲುಪೇಟೆ ಅಂಬೇಡ್ಕರ್ ಭವನದ ಮುಂಭಾಗ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವೇದಿಕೆಯಲ್ಲಿ ಕುಳಿತುಕೊಳ್ಳಲು 250 ಮಂದಿಗೆ ಅವಕಾಶ ಕಲ್ಪಿಸಲಾಗಿದೆ. 30 ಸಾವಿರಕ್ಕೂ‌ ಹೆಚ್ಚು ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *