ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ತೆರಳುತ್ತಿದ್ದ ರಾಹುಲ್ ಗಾಂಧಿಗೆ ಪೊಲೀಸರಿಂದ ತಡೆ

By
1 Min Read

ಇಂಪಾಲ್: ಹಿಂಸಾಚಾರ ಪೀಡಿತ ಮಣಿಪುರಕ್ಕೆ (Manipur)ತೆರಳುತ್ತಿದ್ದ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರನ್ನು (Rahul Gandhi) ಪೊಲೀಸರು ತಡೆದಿದ್ದಾರೆ.

ಜನಾಂಗೀಯ ಹಿಂಸಾಚಾರದಿಂದ ಹಾನಿಗೊಳಗಾದ ಚುರಾಚಂದ್‍ಪುರಕ್ಕೆ ಹೋಗುವ ಮಾರ್ಗದಲ್ಲಿ ಪೊಲೀಸರು ಅವರನ್ನು ಹಾಗೂ ಅವರ ಬೆಂಗಾವಲು ವಾಹನವನ್ನು ತಡೆದಿದ್ದಾರೆ. ಗುರುವಾರ (ಇಂದು) ಬೆಳಗ್ಗೆ ಅವರು ದೆಹಲಿಯಿಂದ ಮಣಿಪುರಕ್ಕೆ ಬಂದಿದ್ದರು. ಈ ವೇಳೆ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ತೆರಳುವ ವೇಳೆ ಪೊಲೀಸರು ತಡೆದಿದ್ದಾರೆ. ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ

ಜೂನ್ 29 ರಿಂದ 2 ದಿನಗಳ ಕಾಲ ಮಣಿಪುರಕ್ಕೆ ಭೇಟಿ ನೀಡಿ, ಹಿಂಸಾಚಾರ ಪೀಡಿತ ಪ್ರದೇಶದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲು ತೀರ್ಮಾನಿಸಿದ್ದರು. ಈ ವೇಳೆ ಜನಾಂಗೀಯ ಘರ್ಷಣೆಯಿಂದ ನಿರಾಶ್ರಿತರಾದ ಜನರೊಂದಿಗೆ ಸಂವಾದಕ್ಕೆ ಯೋಜಿಸಲಾಗಿತ್ತು. ಬಳಿಕ ಇಂಪಾಲ್ ಮತ್ತು ಚುರಾಚಂದ್‍ಪುರದಲ್ಲಿ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲು ತೀರ್ಮಾನಿಸಲಾಗಿತ್ತು.

ಮಣಿಪುರದಲ್ಲಿ ಎಸ್‍ಟಿ ಮೀಸಲಾತಿ ವಿಚಾರವಾಗಿ ಮೈತೇಯ್ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವೆ ಸಂಘರ್ಷ ನಡೆಯುತ್ತಿದೆ. ಇದರಿಂದ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಮೈತೇಯ್ ಹಾಗೂ ಕುಕಿ ಬುಡಕಟ್ಟು ಜನಾಂಗದ ನಡುವಿನ ಘರ್ಷಣೆಯಲ್ಲಿ ಇಲ್ಲಿಯ ವರೆಗೆ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಆಗಸ್ಟ್ 11 ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಂಚಾರ ಆರಂಭ – ಬಿವೈ ರಾಘವೇಂದ್ರ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್