ಕೆಂಪಂಗಿ ಧರಿಸಿ, ಕೂಲಿ ಹೊತ್ತು ನಡೆದ ರಾಹುಲ್ ಗಾಂಧಿ

Public TV
1 Min Read

ನವದೆಹಲಿ: ಇಲ್ಲಿನ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ (Anand Vidhar Railway Station) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು (Rahul Gandhi) ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು.

ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್ ಕೇಸ್ ತಲೆ ಮೇಲೆ ಹೊತ್ತು ನಡೆಯುತ್ತಿರುವ ವೀಡಿಯೋ ಹಾಗೂ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ: ಗಣಪತಿ ವಿಸರ್ಜನೆಯಲ್ಲಿ ಪೊಲೀಸರು ಬ್ಯುಸಿ – 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

ವಯನಾಡು ಸಂಸದರೂ ಆಗಿರುವ ರಾಹುಲ್ ಗಾಂಧಿಯವರು ಟ್ರೋಲಿ ಬ್ಯಾಗ್ ಅನ್ನು ತಲೆ ಮೇಲೆ ಹೊತ್ತುಕೊಂಡು ಹೋಗುತ್ತಿರುವುದನ್ನು ಗಮನಿಸಬಹುದು. ಈ ವೇಳೆ ಅಲ್ಲಿನ ಕಾರ್ಮಿಕರು ‘ರಾಹುಲ್ ಗಾಂಧಿ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಳಿಕ ರೈಲ್ವೇ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರು ಕಾರ್ಮಿಕರ ಸಮಸ್ಯೆಗಳನ್ನು ಆಲಿಸುವುದನ್ನು ಕೂಡ ನಾವು ವೀಡಿಯೋದಲ್ಲಿ ಗಮನಿಸಬಹುದಾಗಿದೆ.

ಈ ಸಂಬಂಧ ಕಾಂಗ್ರೆಸ್ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ರಾಹುಲ್ ಗಾಂಧಿಯವರು ಇಂದು ಆನಂದ್ ವಿಹಾರ್ ರೈಲೇ ನಿಲ್ದಾಣದಲ್ಲಿ ಇಂದು ಕಾರ್ಮಿಕ ಸ್ನೇಹಿತರನ್ನು ಭೇಟಿಯಾಗಿದ್ದಾರೆ. ಅಲ್ಲಿನ ಸ್ಥಿತಿಗತಿ ಕುರಿತು ಕಾರ್ಮಿಕ ಸ್ನೇಹಿತರೊಬ್ಬರು ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ಅವರನ್ನು ರಾಹುಲ್ ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದರು. ಈ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್