ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸೇಲ್ಸ್ ಎಕ್ಸಿಕ್ಯೂಟಿವ್ ಸಾವು

By
1 Min Read

ರಾಯಚೂರು/ಬೆಂಗಳೂರು: ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ರಾಯಚೂರು ಮೂಲದ ಸೇಲ್ಸ್ ಎಕ್ಸಿಕ್ಯೂಟಿವ್ (Sales Executive) ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದ ಬಸವರಾಜ್ (46) ಮೃತ ಸೇಲ್ಸ್ ಎಕ್ಸಿಕ್ಯೂಟಿವ್. ಖಾಸಗಿ ಕಂಪನಿಯಲ್ಲಿ ಕಳೆದ ನಾಲ್ಕು ವರ್ಷದಿಂದ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿದ್ದ ಬಸವರಾಜ್ ಕಂಪನಿಯ ಸ್ನೇಹಿತರೊಂದಿಗೆ ರೆಸಾರ್ಟ್‌ಗೆ ಹೋಗಿದ್ದಾಗ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

ಶನಿವಾರ ರಾತ್ರಿ ರೆಸಾರ್ಟ್‌ನಲ್ಲಿ ಖುಷಿಯಿಂದ ಕಾಲ ಕಳೆಯುತ್ತಿದ್ದ ವೇಳೆ ಬಸವರಾಜ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೃದಯಾಘಾತದಿಂದ ಬಸವರಾಜ್ ಕೊನೆಯುಸಿರೆಳೆದಿದ್ದಾರೆ. ಬಸವರಾಜ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಾಲ್ಕು ವರ್ಷದಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಸದ್ಯ ಬಸವರಾಜ್ ಮೃತದೇಹವನ್ನು ಬೆಂಗಳೂರಿನಿಂದ ಲಿಂಗಸುಗೂರಿನ ಸರ್ಜಾಪುರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: Wimbledon Final | ಪ್ರಶಸ್ತಿಗಾಗಿ ಅಲ್ಕರಾಜ್‌ Vs ಸಿನ್ನ‌ರ್ ನಡುವೆ ಕಾದಾಟ – ಹ್ಯಾಟ್ರಿಕ್‌ ಗೆಲ್ಲುವ ತವಕದಲ್ಲಿ ಅಲ್ಕರಾಜ್‌

Share This Article