Kodagu | ಕಾಲೇಜು ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

Public TV
1 Min Read

ಮಡಿಕೇರಿ: 6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು (Raichur) ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆಯಲ್ಲಿ (Ponnampet) ನಡೆದಿದೆ.

ತಾಲೂಕಿನ ಹಳ್ಳಿಗಟ್ಟು ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಅಂದು ಬಾರದವರಿಗೆ ಇಂದು ಕೂಡ ಸಿಹಿ ಹಂಚಿದ್ದಳು. ಇಂದು ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

ಸಂಜೆ 4:30ರ ಸುಮಾರಿಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಒಳಗಿನಿಂದ ಬಾಗಿಲು ಹಾಕಿಕೊಂಡಿತ್ತು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿದ್ದಾಳೆ. ನಂತರ ಬಾಗಿಲು ತೆಗೆದು ನೋಡಿದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: Hassan | ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಈಕೆ ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಆರು ವಿಷಯ ಬ್ಯಾಕ್‌ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪೋನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಇದನ್ನೂ ಓದಿ: ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Share This Article