ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ

By
0 Min Read

ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಹಟ್ಟಿ ಚಿನ್ನದಗಣಿಯಲ್ಲಿ (Hatti Gold Mine) ಏರ್ ಬ್ಲಾಸ್ಟ್ (Air Blast) ಆಗಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತನನ್ನು ಶರಣಬಸವ (40) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಕಾರ್ಮಿಕನನ್ನು ನಿರುಪಾದಿ ಎಂದು ಗುರುತಿಸಲಾಗಿದೆ. ಚಿನ್ನದ ಗಣಿಯ ಮಲ್ಲಪ್ಪ ಶಾಫ್ಟ್‍ನಲ್ಲಿ ಈ ಅವಘಡ ಸಂಭವಿಸಿದೆ. ಸುಮಾರು 2,800 ಅಡಿ ಆಳದಲ್ಲಿ ಗಣಿಗಾರಿಕೆ ಮಾಡುತ್ತಿದ್ದಾಗ ಏರ್ ಬ್ಲಾಸ್ಟ್ ಆಗಿದೆ ಎಂದು ತಿಳಿದು ಬಂದಿದೆ.

ಕೆಳಗೆ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಚಿನ್ನದ ಗಣಿ ರೆಸ್ಕ್ಯೂ ಟೀಂನಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡ ಕಾರ್ಮಿಕನನ್ನ ಚಿನ್ನದ ಗಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article