ರಾಯಚೂರಿನಲ್ಲಿ 15 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು

Public TV
1 Min Read

– ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಮನವಿ

ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ (Raichur) ಕಳೆದ 15 ವರ್ಷಗಳಲ್ಲೇ ಈ ಬಾರಿ ದಾಖಲೆಯ ಅತೀ ಹೆಚ್ಚು ತಾಪಮಾನ ದಾಖಲಾಗಿದೆ.

ರಾಯಚೂರು ತಾಲೂಕಿನಲ್ಲಿ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಮುಂದಿನ ಮೂರು ದಿನಗಳಲ್ಲಿ 43 ರಿಂದ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಮುನ್ಸೂಚನೆಯಿದೆ. ತಾಪಮಾನದಲ್ಲಿ ಕಲಬುರಗಿಯನ್ನೂ ರಾಯಚೂರು ಹಿಂದಿಕ್ಕಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ತಾಪಮಾನ ದಾಖಲಾಗುತ್ತಿದೆ.

ಇನ್ನುಉತ್ತರ ಕರ್ನಾಟಕದ ಭಾಗದ ಬಹುತೇಕ ಎಲ್ಲ ಜಿಲ್ಲೆ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿಸಿ ಗಾಳಿ (Heat Wave) ಬೀಸಲಿದೆ ಎಂಬ ಮುನಸೂಚನೆಯನ್ನು ಕೂಡ ಇಲಾಖೆ ಕೊಟ್ಟಿದೆ. ಒಟ್ಟಿನಲ್ಲಿ ಬಿಸಿಗಾಳಿ ಹೆಚ್ಚಳದಿಂದ ತಾಪಮಾನದಲ್ಲಿ‌ ಹೆಚ್ಚಳವಾಗಿದೆ. ಹೀಗಾಗಿ ಬೆಳಗ್ಗೆ 11:30 ರಿಂದ ಮಧ್ಯಾಹ್ನ 3 ರ ವರೆಗೆ ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಹವಾಮಾನ ಇಲಾಖೆ ಹಾಗೂ ರಾಯಚೂರು ಕೃಷಿ ವಿವಿ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಉಷ್ಣ ಅಲೆಯ ಎಚ್ಚರಿಕೆ

Share This Article