RSS ಪಥಸಂಚಲನದಲ್ಲಿ ಭಾಗಿ- ರಾಯಚೂರಿನ PDO ಅಮಾನತು

1 Min Read

ರಾಯಚೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚನದಲ್ಲಿ ಭಾಗಿಯಾದ ಆರೋಪದಡಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯನ್ನು (PDO) ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.

ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

 

ಇದೇ ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.

ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share This Article