10ಕ್ಕೂ ಹೆಚ್ಚು ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ – ಸೋಮವಾರದ ಒಳಗೆ ಬಂದ್‌ಗೆ ಸೂಚನೆ!

Public TV
1 Min Read

– ಗಡುವು ಮೀರಿದ್ರೆ ಕ್ರಿಮಿನಲ್‌ ಕೇಸ್‌ ಎಚ್ಚರಿಕೆ!

ರಾಯಚೂರು: ಇಲ್ಲಿನ ಲಿಂಗಸುಗೂರು ಪಟ್ಟಣದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ (Coaching Centre) ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.

ಲಿಂಗಸೂಗೂರು ಎಸಿ ಅವಿನಾಶ್ ಶಿಂಧೆ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಸೋಮವಾರದೊಳಗಾಗಿ ಎಲ್ಲಾ ಕೋಚಿಂಗ್ ಸೆಂಟರ್‌ಗಳು ಬಂದ್ ಆಗಬೇಕು. ಗಡುವು ಮೀರಿದ ಬಳಿಕ ಕ್ಲಾಸ್ (Coaching Class) ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಅನುಮತಿ ಪಡೆಯದೇ ರಾಜಾರೋಷವಾಗಿ ಕೋಚಿಂಗ್‌ ಸೆಂಟರ್‌ ನಡೆಸುತ್ತಿದ್ದದ್ದು ಕಂಡುಬಂದಿದೆ. ಕೆಲವು ವಸತಿ ಸಹಿತವಾಗಿದ್ದರೆ, ಇನ್ನೂ ಕೆಲವು ವಸತಿ ರಹಿತವಾಗಿ ನಡೆಸುತ್ತಿದ್ದದ್ದು ಪತ್ತೆಯಾಗಿದೆ. ಹಾಗಾಗಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೋಮವಾರದ ಒಳಗೆ ಕೋಚಿಂಗ್‌ ಸೆಂಟರ್‌ಗಳನ್ನು ಬಂದ್‌ ಮಾಡುವಂತೆ ಸೂಚಿಸಿದೆ.

ಎಲ್ಲಾ ಕೇಂದ್ರಗಳನ್ನು ಬಂದ್‌ ಮಾಡಿದ ಮಕ್ಕಳನ್ನು ತಮ್ಮ ತಮ್ಮ ಪೋಷಕರ ಬಳಿ ಕಳುಹಿಸಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ ಎಚ್ಚರಿಕೆ ನೀಡಿದ್ದಾರೆ.

Share This Article