ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ – ಗಂಭೀರ ಗಾಯ

1 Min Read

ಹಾಸನ: ಸಕಲೇಶಪುರ (Sakleshpur) ತಾಲೂಕಿನ ಎಡಕುಮೇರಿ – ಶಿರಬಾಗಿಲು ಮಾರ್ಗದ ರೈಲ್ವೇ ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದಿದೆ. ರೈಲು (Train) ಡಿಕ್ಕಿಯಾದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಾಳುವನ್ನು ಸಚಿನ್ (36) ಎಂದು ಗುರುತಿಸಲಾಗಿದೆ. ರೈಲು ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದೆ. ಈ ವೇಳೆ ಸಚಿನ್ ಅವರ ತಲೆ, ಎದೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿದ್ದ ಇತರ ನೌಕರರರು ಸಚಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: 30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Share This Article