ರಾಜ್ಯದ ಹಲವೆಡೆ ಮುಂದುವರಿದ ಮಳೆ – ಕರಾವಳಿಗೆ ಆರೆಂಜ್, ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
1 Min Read

ಬೆಂಗಳೂರು: ಕಳೆದ ಒಂದು ವಾರದಿಂದ ಅಬ್ಬರಿಸುತ್ತಿದ್ದ ಮಳೆ ಇದೀಗ ಕೊಂಚ ಬಿಡುವು ನೀಡಿದೆ. ಇಂದಿನಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕೊಂಚ ತಗ್ಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.ಇದನ್ನೂ ಓದಿ: ವರ್ಷಕ್ಕೆ 30 ದಿನ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ

ಇನ್ನೂ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಇಂದಿನಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಇನ್ನೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾವೇರಿ, ಬೆಳಗಾವಿ ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಇದನ್ನೂ ಓದಿ: ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್

Share This Article