ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಾವಣಗೆರೆ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಸಾಧ್ಯತೆ ಇದೆ. ಇದನ್ನೂ ಓದಿ: ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ ಮತೀನ್ ಬಾಂಬ್ ಸ್ಫೋಟದ ಸೂತ್ರಧಾರ!
ಇನ್ನು ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಕೊಡಗು, ಯಾದಗಿರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂ ಮಳೆ ಸಾಧ್ಯತೆಯಿದ್ದು, ಈ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಿಂಚು, ಗುಡುಗು ಸಹಿತ ಬಿರುಗಾಳಿ ಮಳೆ ಮೂನ್ಸೂಚನೆ ನೀಡಿದೆ.
ಸುಡು ಬಿಸಿಲ ಬೇಗೆಯ ಹೊತ್ತಲ್ಲಿ ಅಲ್ಲಲ್ಲಿ ಮಳೆಯಾಗುತ್ತಿರುವುದು ಜನರ ಮುಖದಲ್ಲಿ ಸಂತಸ ಮೂಡಿಸಿದೆ. ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ದಾಖಲೆಯ ಬಿಸಿಲ ತಾಪಮಾನ ದಾಖಲಾಗಿದ್ದು ಅಚ್ಚರಿ ಮೂಡಿಸಿತ್ತು. ಈ ಸಂದರ್ಭದಲ್ಲಿ ಹಲವೆಡೆ ಮಳೆಯಾಗುತ್ತಿದೆ. ಇದರಿಂದ ಜನ-ಜಾನುವಾರುಗಳು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆ, ಮೋದಿ ವಿರುದ್ಧ ರಾಜಕೀಯ ತೆವಲಿಗೆ ಮಾತಾಡ್ತಿದ್ದಾರೆ: ಜೋಶಿ ಗರಂ