ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರೆಡು ದಿನ ಮಳೆ: ಹವಾಮಾನ ಇಲಾಖೆ

Public TV
1 Min Read

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ. ಜೂನ್ 16 ರಿಂದ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಕುವೆಂಪು, ಬಸವಣ್ಣಗೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು: ಹಂಸಲೇಖ

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ ಎಂದು ಹೇಳಿದೆ.

ಚಾಮರಾಜನಗರದ‌ಲ್ಲಿ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರಗಳಲ್ಲಿ ಮೈಕ್‌ ಸಕ್ರಮಕ್ಕೆ ನೀಡಿದ್ದ ಗಡುವು ಅಂತ್ಯ – ಇಂದಿನಿಂದ ಪೊಲೀಸ್‌ ಕಾರ್ಯಾಚರಣೆ

Share This Article
Leave a Comment

Leave a Reply

Your email address will not be published. Required fields are marked *