ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

1 Min Read

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ.

ಇಂದು (ಏ.29) ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ. ನಾಳೆ (ಏ.30) 24 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಇದನ್ನೂ ಓದಿ: ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

ಮೇ 1ರಂದು ರಾಯಚೂರು, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಿಗೆ ಒಟ್ಟು 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಮೇ 2ರಂದು ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಸಮಯದಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದ್ದು, ಕೆಲವೆಡೆ ಭಾರೀ ಮಳೆ ಸಾಧ್ಯತೆ ಎಂದು ತಿಳಿಸಿದೆ.ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Share This Article