ರಾಜ್ಯಾದ್ಯಂತ ಮುಂದಿನ 5 ದಿನ ಮಳೆಯ ಮುನ್ಸೂಚನೆ

Public TV
1 Min Read

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ (Arabian Sea) ವಾಯುಭಾರ ಕುಸಿತವಾದ ಹಿನ್ನೆಲೆ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗುವ (Rain) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಬಾಂಗ್ಲಾ ಚುಕ್ಕಾಣಿ ಹಿಡಿಯಲಿದ್ದಾರೆ ಹಸೀನಾ ಕಟು ಟೀಕಾಕಾರ ಮೊಹಮ್ಮದ್‌ ಯೂನುಸ್‌

ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ವಾಡಿಕೆಯಂತೆ 22 ಸೆಂ.ಮೀ ಮಳೆಯಾಗಬೇಕು. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಆಗಸ್ಟ್ ತಿಂಗಳಲ್ಲಿ 82 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ಟ್ರಫ್ ಅಥವಾ ವಾಯುಭಾರ ಕುಸಿತ ಉಂಟಾದರೆ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತದೆ. ಉತ್ತರ ಒಳನಾಡಿನಲ್ಲಿ 12 ಸೆಂ.ಮೀ ಮಳೆಯಾಗಬೇಕು. ಆದರೆ ನೀರಿಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಇದನ್ನೂ ಓದಿ: ವಿಶ್ವದ ಅತಿದೊಡ್ಡ ಯುರೇನಿಯಂ ಗಣಿಗಾರಿಕೆಯನ್ನು ಆಸ್ಟ್ರೇಲಿಯಾ ನಿಷೇಧಿಸಿದ್ದೇಕೆ? 

ದಕ್ಷಿಣ ಒಳನಾಡಿನಲ್ಲಿ 18 ಸೆಂ.ಮೀ ಮಳೆಯಾಗಬೇಕು. ಇದಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ 12 ಸೆಂ.ಮೀ ಮಳೆಯಾಗಬೇಕು. ಆದರೆ ಮಂಗಳವಾರ ಒಂದೇ ದಿನ 4 ಸೆಂ.ಮೀ ಮಳೆಯಾಗಿದ್ದು, ಇನ್ನೂ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಬಾಂಗ್ಲಾ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್‌ ಶಾಂತಿ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ಆಯ್ಕೆ

Share This Article