ರಾಜ್ಯಕ್ಕೆ ಮುಂದಿನ 6 ದಿನಗಳ ಕಾಲ ಮಳೆಯ ಮುನ್ಸೂಚನೆ

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ತಡರಾತ್ರಿ ಮಳೆಯಾಗಿದ್ದು (Rain), ಮುಂದಿನ 6 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ (Meteorological Department) ನೀಡಿದೆ.

ರಾಜ್ಯದಲ್ಲಿ ಇಂದಿನಿಂದ (ಶನಿವಾರ) ಮೇ 16ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೊಡಗು: ಬಾಲಕಿಯ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌ – ಇನ್ನೂ ಪತ್ತೆಯಾಗದ ರುಂಡ

ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅಬ್ಬರ; ಮನೆಗಳಿಗೆ ನುಗ್ಗಿದ ನೀರು

Share This Article