ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ

Public TV
1 Min Read

ಬೆಂಗಳೂರು: ಸಿಲಿಕಾನ್‌ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿಂದು (Bengaluru) ಸಾಧಾರಣದಿಂದ ಹಗುರ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: APMCಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ ಆರೋಪ; ‌ʻಕೈʼ ಸರ್ಕಾರದ ವಿರುದ್ಧ ಮತ್ತೊಂದು ಕಮೀಷನ್ ಬಾಂಬ್!

ಬೆಂಗಳೂರು ಹೊರತುಪಡಿಸಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಇದನ್ನೂ ಓದಿ: Photo Gallery | ಸಾಂಸ್ಕೃತಿಕ, ಪರಂಪರೆ ಹೆಗ್ಗುರುತು ಸಾರಿದ ಕರಗ ಶಕ್ತ್ಯೋತ್ಸವ

Share This Article