ಮುಂದಿನ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಮಳೆಯ ಮುನ್ಸೂಚನೆ

By
1 Min Read

ಬೆಂಗಳೂರು: ಬರದ ಆತಂಕದ ನಡುವೆ ರಾಜ್ಯದಲ್ಲಿ ಮಳೆರಾಯ ತಂಪೆರೆಯುತ್ತಿದ್ದಾನೆ. ಮುಂದಿನ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಮಳೆಯ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Department) ಕೊಟ್ಟಿದೆ.

ಸಿಲಿಕಾನ್ ಸಿಟಿ ಮಂದಿಯನ್ನು ಸಂಜೆ ಮಳೆ ಕಾಡಲಿದೆ. ಮಳೆ ಜೊತೆ ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಸೂಚನೆ ಕೊಟ್ಟಿದೆ. ಇದನ್ನೂ ಓದಿ: ಆಸ್ಪತ್ರೆ ಸಿಬ್ಬಂದಿಯಿಂದ ಪ್ರಥಮ ಚಿಕಿತ್ಸೆಯ ಎಡವಟ್ಟು- ರಟ್ಟು ಇಟ್ಟು ಬ್ಯಾಂಡೇಜ್!

ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳು ಉತ್ತರ ಒಳನಾಡಿನ ಬೀದರ್, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಉತ್ತರ ಒಳನಾಡು ಕರಾವಳಿ ಭಾಗಗಳಿಗೆ ಗುಡುಗು ಮಿಂಚಿನ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಗಾಳಿಯ ವೇಗ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಇಲಾಖೆ ನೀಡಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್