ಬೆಂಗಳೂರು ಸೇರಿ ರಾಜ್ಯದ ಹಲವೆಡೆ 3 ದಿನ ಮಳೆ ಸಾಧ್ಯತೆ

Public TV
1 Min Read

ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್‌ ಉಂಟಾಗಿರುವ ಪರಿಣಾಮ ಬೆಂಗಳೂರು (Bengaluru Rain) ಸೇರಿ ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಏ.23ರವರೆಗೆ ಗುಡುಗು, ಮಿಂಚಿನ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಎ.ಪ್ರಸಾದ್‌ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗಾಗಿ ಒದೆ ತಿಂದಿದ್ದೇನೆ, ನನ್ನ ಪ್ಯಾಂಟ್‌ ಹರಿದು ಹಾಕಿದ್ರು – ವಿ.ಸೋಮಣ್ಣ

ಬಿಸಿಲ ಬೇಗೆಯಿಂದ ಬಸವಳಿದಿದ್ದ ಬೆಂಗಳೂರು ನಗರಕ್ಕೆ ಇಂದು ವರುಣನ ಸಿಂಚನವಾಗಿದೆ. ರಾಜಧಾನಿಯ ಬ್ಯಾಟರಾಯನಪುರ, ಯಲಹಂಕ, ಹೆಬ್ಬಾಳ ಸುತ್ತಮುತ್ತ ಭಾರೀ ಮಳೆಯಾಗಿದೆ. ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ 3 ದಿನ ಮಾಳೆಯಾಗುವ ಸಂಭವವಿದೆ. ಕರಾವಳಿ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಸೇರಿದ ಬೆನ್ನಲ್ಲೇ ಆರಂಭಿಕ ಆಘಾತ

Share This Article