ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

1 Min Read

– ಮರ ಬಿದ್ದು ಸಂಚಾರ ವ್ಯತ್ಯಯ

ಮಡಿಕೇರಿ: ಕೊಡಗು (Kodagu) ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ (Rain) ಮಳೆಯಾಗಿದೆ. ಸುಂಟಿಕೊಪ್ಪದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ.

ಸಿಡಿಲ ಅಬ್ಬರಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ಇನ್ನೂ ಭಾರೀ ಗಾಳಿಮಳೆಗೆ ಭಾಗಮಂಡಲ ತಲಕಾವೇರಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಮರ ಬಿದ್ದ ಪರಿಣಾಮದಿಂದ ಕೆಲ ಕಾಲ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಇದನ್ನೂ ಓದಿ: ಸಕಲೇಶಪುರದಲ್ಲಿ ಭಾರೀ ಮಳೆ – ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಾಯ, ಓರ್ವಳ ಸ್ಥಿತಿ ಗಂಭೀರ

ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿ ಮಳೆ, ಗುಡುಗು ಸಿಡಿಲಿನ ಸಮಯದಲ್ಲಿ ಮರಗಳ ಬಳಿ ಜನ ನಿಲ್ಲಬಾರದು. ಶಿಥಿಲಾವಸ್ಥೆಯ ಕಟ್ಟಡಗಳ ಬಳಿ ಇರದೇ, ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Share This Article