ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಗುಡುಗು ಸಹಿತ ಮಳೆ – ಗಂಟೆಗೆ 50 ಕಿಮೀ ವೇಗದಲ್ಲಿ ಬೀಸಲಿದೆ ಗಾಳಿ!

Public TV
1 Min Read

ಬೆಂಗಳೂರು: ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ನಾಳೆ ಹಗುರ ಮಳೆಯಾಗಲಿದೆ. ನಗರದ ಕೆಲವೆಡೆ ಮೋಡಕವಿದ ವಾತಾವರಣ ಇದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

Share This Article