ರಾಜಾ ರಘುವಂಶಿ ಕೊಲೆ ಪ್ರಕರಣ – ಹಂತಕಿ ಸೇರಿ ಐವರನ್ನು ಮೇಘಾಲಯಕ್ಕೆ ಕರೆತಂದ ಪೊಲೀಸರು

Public TV
2 Min Read

– ಇಂದು ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರು

ಶಿಲ್ಲಾಂಗ್: ಮೇಘಾಲಯದಲ್ಲಿ (Meghalaya) ರಾಜಾ ರಘುವಂಶಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕಿ ಪತ್ನಿ ಸೋನಂ (Sonam) ಹಾಗೂ ಐವರನ್ನು ಬಂಧಿಸಿದ ಪೊಲೀಸರು ಮಂಗಳವಾರ ತಡರಾತ್ರಿ ಆರೋಪಿಗಳನ್ನು ಮೇಘಾಲಯಕ್ಕೆ ಕರೆತಂದಿದ್ದಾರೆ.

ಮಂಗಳವಾರ ರಾತ್ರಿಯೇ ಆರೋಪಿಗಳ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ. ಇಂದು ಮೇಘಾಲಯ ಪೊಲೀಸರು ಸೋನಮ್ ಮತ್ತು ರಾಜ್ ಕುಶ್ವಾಹ ಜೊತೆಗೆ ಇತರ ಆರೋಪಿಗಳಾದ ವಿಶಾಲ್ ಚೌಹಾಣ್, ಆಕಾಶ್ ರಜಪೂತ್ ಮತ್ತು ಆನಂದ್ ಕುರ್ಮಿಯನ್ನು ಪೊಲೀಸರು ಶಿಲ್ಲಾಂಗ್ ನ್ಯಾಯಾಲಯದಲ್ಲಿ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: Kolar | ಮಾವಿನ ಹಣ್ಣಿಗೆ ಬೆಲೆ ಕುಸಿತ – ಇಂದು ಶ್ರೀನಿವಾಸಪುರ ತಾಲೂಕು ಬಂದ್

ಆರೋಪಿಗಳನ್ನು ವಶಕ್ಕೆ ಪಡೆದ ಬಳಿಕ ಪೊಲೀಸರು ಸೋನಂ ಅನ್ನು ಅಪರಾಧ ಸ್ಥಳಕ್ಕೆ ಕರೆದೊಯ್ಯಲಿದ್ದಾರೆ. ಅಲ್ಲಿ ಅಪರಾಧ ದೃಶ್ಯವನ್ನು ಮರುಸೃಷ್ಟಿಸಲಾಗುವುದು ಎಂದು ಹೇಳಲಾಗುತ್ತಿದೆ. ಈ ನಡುವೆ ರಾಜಾ ರಘುವಂಶಿ ಕೊಲೆ ನಡೆಯುವಾಗ ಸೋನಂ ಸ್ಥಳದಲ್ಲಿ ಇದ್ದಳು, ಹತ್ಯೆಯನ್ನು ಕಣ್ಣಾರೆ ಕಂಡಿದ್ದಾಳೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ

ಕೊಲೆ ಬಳಿಕ ವಾರಣಾಸಿಯ ಡಾಬಾವೊಂದರ ಬಳಿ ಸೋನಮ್‌ನ್ನು ಪೊಲೀಸರು ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆ ನಂತರ ಉತ್ತರ ಪ್ರದೇಶ ಪೊಲೀಸರು ಆಕೆಯನ್ನು ಮೇಘಾಲಯ ಪೊಲೀಸರಿಗೆ ಹಸ್ತಾಂತರಿಸಿದ್ದರು. ಮಂಗಳವಾರ ಬೆಳಗ್ಗೆ ಮೇಘಾಲಯ ಪೊಲೀಸರು ಆಕೆಯನ್ನು ಬಿಹಾರದ ಪಾಟ್ನಾದ ಫುಲ್ವರಿ ಷರೀಫ್ ಠಾಣೆಗೆ ಕರೆತಂದಿದ್ದು, ತಡರಾತ್ರಿ ಮೇಘಾಲಯಕ್ಕೆ ಕರೆತಂದಿದ್ದಾರೆ. ಇದನ್ನೂ ಓದಿ: ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ

ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ರೀತಿಯಲ್ಲಿ ಹನಿಮೂನ್‌ಗೆ ಕರೆದೊಯ್ದು ಪತಿಯನ್ನು ಹತ್ಯೆಗೈದ ಆರೋಪಿ ಪತ್ನಿ ಸೋನಂ ರಘುವಂಶಿಯ ಕರಾಳ ಮುಖಗಳು ಒಂದೊಂದಾಗಿ ಬಹಿರಂಗವಾಗುತ್ತಿದೆ. ಸೋನಮ್ ತನ್ನ ಪತಿ ರಾಜಾ ರಘುವಂಶಿಯನ್ನು ಕೊಲೆ ಮಾಡಲು 4 ಲಕ್ಷ ರೂ.ಗೆ ನೀಡಿದ್ದ ಸುಪಾರಿಯನ್ನು 20 ಲಕ್ಷ ರೂ.ಗೆ ಏರಿಸಿದ್ದಳು ಎನ್ನುವುದು ಬೆಳಕಿಗೆ ಬಂದಿದೆ. ವಿವಾಹವಾದ ಕೆಲವೇ ದಿನಗಳಲ್ಲಿ ಹಂತಕಿ ತನ್ನ ಪ್ರಿಯಕರ ರಾಜ್ ಕುಶ್ವಾಹ ಜೊತೆ ಸೇರಿಕೊಂಡು ಕೊಲೆಗೆ ಪ್ಲ್ಯಾನ್ ಮಾಡಿದ್ದಳು. ಜೊತೆಗೆ ಒನ್-ವೇ ಟಿಕೆಟ್ ಮಾತ್ರ ಬುಕ್ ಮಾಡಲಾಗಿತ್ತು. ಯೋಜನೆಯಂತೆ ಸೊಹ್ರಾಕ್ಕೆ ತೆರಳಿದ ಬಳಿಕ ಪತಿ ರಾಜ ರಘುವಂಶಿ ಹತ್ಯೆಗೆ ಸೋನಮ್ ಬಾಡಿಗೆ ಹಂತಕರನ್ನು ನೇಮಿಸಿದ್ದಳು. ಜೊತೆಗೆ ಕೊಲೆ ಬಳಿಕ 4 ಲಕ್ಷ ರೂ. ಕೊಡುವುದಾಗಿ ಸುಪಾರಿ ನೀಡಿದ್ದಳು. ಇದನ್ನೂ ಓದಿ: ನಂದಿಬೆಟ್ಟಕ್ಕೆ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

ಮೇ 23ರಂದು ಸೋನಮ್ ಮತ್ತು ರಾಜಾ ರಘುವಂಶಿ ಸೊಹ್ರಾದಲ್ಲಿನ ಜಲಪಾತವನ್ನು ನೋಡಲು ಶಿಖರವನ್ನು ಹತ್ತಿಕೊಂಡು ಹೋಗುತ್ತಿದ್ದರು. ಈ ವೇಳೆ ಹಂತಕರು ಅವರನ್ನು ಹಿಂಬಾಲಿಸುತ್ತಿದ್ದರು. ಇದನ್ನರಿತ ಸೋನಮ್ ನಿರ್ಜನ ಪ್ರದೇಶ ಕಾಣಿಸಿದಂತೆ ಆಯಾಸವಾದಂತೆ ನಟಿಸಿದ್ದಳು. ಆಗ ಹಂತಕರನ್ನು ಕೊಲೆ ಮಾಡುವಂತೆ ಕೇಳಿಕೊಂಡಿದ್ದಾಳೆ. ಆದರೆ ಹಂತಕರು ತಾವು ಆಯಾಸಗೊಂಡಿರುವುದಾಗಿ ತಿಳಿಸಿದ್ದಾರೆ. ಇದರಿಂದ ಸೋನಮ್ ಸುಪಾರಿ ಹಣವನ್ನು 4 ಲಕ್ಷ ರೂ.ದಿಂದ 20 ಲಕ್ಷ ರೂ.ಗೆ ಹೆಚ್ಚಿಸಿದ್ದಳು. ಜೊತೆಗೆ ಕೊಲೆಯಾದ ಬಳಿಕ ತನ್ನ ಪತಿ ಹಣವನ್ನು ಕಂದಕಕ್ಕೆ ಎಸೆಯಲು ಹಂತಕರಿಗೆ ಸಹಾಯ ಮಾಡಿದ್ದಳು ಎಂದು ವರದಿಯಾಗಿದೆ. ಇದನ್ನೂ ಓದಿ: Bengaluru | ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ

Share This Article