‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ತೆಲುಗು ನಿರ್ದೇಶಕ ಕಿಡಿಕಿಡಿ

Public TV
1 Min Read

ಬಾರಿ ಆಸ್ಕರ್ (Oscar) ಪ್ರಶಸ್ತಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಧಾವಂತದಲ್ಲಿದೆ ಆರ್.ಆರ್.ಆರ್ (RRR) ಚಿತ್ರತಂಡ. ಈ ಪ್ರಶಸ್ತಿಯಲ್ಲಿ ಭಾಗಿಯಾಗಲು ಹಲವು ನಿಯಮಗಳಿದ್ದು ಆ ಎಲ್ಲ ನಿಯಮಗಳನ್ನು ಪೂರೈಸಿ, ಇದೀಗ ಅಂತಿಮ ಹಂತವನ್ನೂ ಅದು ತಲುಪಿದೆ. ಮಾರ್ಚ್ 12ಕ್ಕೆ ಪ್ರಶಸ್ತಿ ಘೋಷಣೆ ಮತ್ತು ಪ್ರದಾನ ಸಮಾರಂಭವೂ ನಡೆಯಲಿದ್ದು, ಈ ವೇದಿಕೆಯ ಮೇಲೆ ಆರ್.ಆರ್.ಆರ್ ಚಿತ್ರದ ನಾಯಕರಾದ ಜ್ಯೂನಿಯರ್ ಎನ್.ಟಿ.ಆರ್ (Jr. NTR,) ಹಾಗೂ ರಾಮ್ ಚರಣ್ (Ram Charan) ‘ನಾಟು ನಾಟು’ ಗೀತೆಗೆ ಹೆಜ್ಜೆ ಹಾಕಲಿದ್ದಾರೆ. ಈ ಹಾಡೇ ಅಂತಿಮ ಸುತ್ತಿಗೆ ಆಯ್ಕೆಯೂ ಆಗಿದೆ.

ಆರ್.ಆರ್.ಆರ್ ಸಿನಿಮಾದ ಹಾಡಿಗೆ ಆಸ್ಕರ್ ಬರಲಿ ಎಂದು ದೇಶಕ್ಕೆ ದೇಶವೇ ಪ್ರಾರ್ಥಿಸುತ್ತಿದ್ದರೆ, ತೆಲುಗಿನ ಹಿರಿಯ ನಿರ್ದೇಶಕ ತಮ್ಮಾರೆಡ್ಡಿ (Thamarreddy Bharadwaj) ಚಿತ್ರತಂಡದ ವಿರುದ್ಧ ಕಿಡಿಕಾರಿದ್ದಾರೆ. ಆಸ್ಕರ್ ಪ್ರಶಸ್ತಿಯನ್ನು ಪಡೆಯಲೆಂದು ಆರ್.ಆರ್.ಆರ್ ಚಿತ್ರದ ನಿರ್ದೇಶಕ ರಾಜಮೌಳಿ (Rajamouli) ಬರೋಬ್ಬರಿ 80 ಕೋಟಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೊತ್ತದಲ್ಲಿ ತಾವು ಹತ್ತು ಸಿನಿಮಾಗಳನ್ನು ತಯಾರಿಸುತ್ತಿದ್ದೆ ಎಂದಿದ್ದಾರೆ. ಇದನ್ನೂ ಓದಿ: ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

‘ನಾನು ಆರೋಪ ಮಾಡುತ್ತಿಲ್ಲ. ನನಗೆ ಗೊತ್ತಿರುವವರೇ ಹೇಳಿರುವಂತೆ ಆಸ್ಕರ್ ಪ್ರಶಸ್ತಿಗಾಗಿ ರಾಜಮೌಳಿ ಮತ್ತು ತಂಡ ನೀರಿನಂತೆ ಹಣ ಖರ್ಚು ಮಾಡಿದ್ದಾರೆ. ಎಂಬತ್ತು ಕೋಟಿ ಖರ್ಚಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ ಸಿನಿಮಾ ಬಿಡುಗಡೆ, ಪ್ರಚಾರ, ತಂಡದ ಖರ್ಚು ಮತ್ತು ಆಸ್ಕರ್ ಪ್ರಶಸ್ತಿಗಾಗಿ ಮಾಡಬೇಕಾದ ಖರ್ಚು ಹೀಗೆ ಕೋಟಿ ಕೋಟಿ ಸುರಿದಿದ್ದಾರೆ. ಇಷ್ಟು ಹಣ ಖರ್ಚು ಮಾಡಿ ಪ್ರಶಸ್ತಿ ಪಡೆಯಬೇಕಾ?’ ಎಂದು ಅವರು ತಮ್ಮಾರೆಡ್ಡಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

ಕನ್ನಡದ ಕೆಜಿಎಫ್ 2 ಚಿತ್ರಕ್ಕೆ ನೂರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಆಸ್ಕರ್ ಪ್ರಶಸ್ತಿಗಾಗಿ ಆರ್.ಆರ್.ಆರ್ ಎಂಬತ್ತು ಕೋಟಿ ಖರ್ಚು ಮಾಡಿದ್ದಾರೆ. ಇಪ್ಪತ್ತು ಕೋಟಿ ಸೇರಿಸಿದ್ದರೆ ಮತ್ತೊಂದು ಕೆಜಿಎಫ್ ಮಾದರಿಯ ಚಿತ್ರ ಮಾಡಬಹುದಿತ್ತು ಎಂದು ತಮ್ಮಾರೆಡ್ಡಿ ಲೇವಡಿ ಮಾಡಿದ್ದಾರೆ. ಇವರ ಮಾತು ತೆಲುಗು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ.

Share This Article
Leave a Comment

Leave a Reply

Your email address will not be published. Required fields are marked *