ಚಂದ್ರಯಾನ ಸಂಭ್ರಮಾಚರಣೆ ಮಾಡಿದವರ ಮೇಲೆ ಕಾಶ್ಮೀರಿ ವಿದ್ಯಾರ್ಥಿಗಳಿಂದ ಹಲ್ಲೆ

Public TV
1 Min Read

ಜೈಪುರ್: ಚಂದ್ರಯಾನ -3 (Chandrayaan-3) ಯಶಸ್ವಿಯಾಗಿದ್ದಕ್ಕೆ ವಿಶ್ವದೆಲ್ಲೆಡೆ ಸಂಭ್ರಮ ಆಚರಿಸಿದರೆ ರಾಜಸ್ಥಾನದ (Rajasthan) ಮೇವಾರ್ ವಿಶ್ವವಿದ್ಯಾಲಯದಲ್ಲಿ (Mewar University) ಸಂಭ್ರಮಾಚರಣೆ ಮಾಡಿದವರ ಮೇಲೆ ಹಲ್ಲೆ ಮಾಡಿದ ಘಟನೆ ವರದಿಯಾಗಿದೆ.

ವಿಶ್ವವಿದ್ಯಾಲಯದ ಕಾಶ್ಮೀರಿ ವಿದ್ಯಾರ್ಥಿಗಳು ಹಾಗೂ ಇತರ ವಿದ್ಯಾರ್ಥಿಗಳ ನಡುವೆ ಚಂದ್ರಯಾನ-3ರ ಯಶಸ್ಸಿನ ಸಂಭ್ರಮಾಚರಣೆಯಿಂದಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ. ವಿಶ್ವವಿದ್ಯಾನಿಲಯದಲ್ಲಿ ಎರಡು ವಿದ್ಯಾರ್ಥಿ ಬಣಗಳ ನಡುವಿನ ಈ ವಿವಾದವು ಕಲ್ಲು ತೂರಾಟ ಮತ್ತು ಆಯುಧಗಳಿಂದ ದಾಳಿಗೆ ಕಾರಣವಾಗಿದೆ. ಆದರೆ ವಿಶ್ವವಿದ್ಯಾನಿಲಯ ಈ ಬಗ್ಗೆ ಮೆಸ್‍ನಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಗುರಾಯಿಸುತ್ತಿದ್ದಾನೆ ಎಂಬ ಕಾರಣಕ್ಕೆ ರಾಹುಲ್ ಎಂಬಾತನ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಿಕೊಂಡಿದೆ. ಇದನ್ನೂ ಓದಿ: ಕಾರವಾರದಲ್ಲಿ ಸೇತುವೆ ಸಂಪರ್ಕ ಬಂದ್- ಕಿ.ಮೀ ಗಟ್ಟಲೇ ವ್ಯಕ್ತಿ ಹೊತ್ತೊಯ್ದ ಜನ

ಆದರೆ ಚಂದ್ರಯಾನ-3ರ ಯಶಸ್ಸಿನ ಸಂಭ್ರಮಾಚರಣೆಯೇ ನಿಜವಾದ ಕಾರಣ ಎಂದು ಹೇಳಲಾಗುತ್ತಿದೆ. ಕಾಶ್ಮೀರಿ ವಿದ್ಯಾರ್ಥಿಗಳು ನಡೆಸಿದ ಹಲ್ಲೆಯಿಂದ ರಾಹುಲ್ ಬೆಂಬಲಿಗರು ತೀವ್ರ ವಾಗ್ವಾದ ನಡೆಸಿದ್ದಾರೆ. ಬಳಿಕ ನಡೆದ ಗಲಾಟೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಪ್ರಕರಣದಲ್ಲಿ ಶಾಂತಿ ಭಂಗದ ಆರೋಪದಡಿ 36 ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ವಿಶ್ವವಿದ್ಯಾಲಯದ ಆವರಣದ ಹೊರಗೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಶಾಂತಿ ಕಾಪಾಡುವಂತೆ ಪೊಲೀಸರು ಎರಡೂ ಸಮುದಾಯದ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ಘಟನೆಯ ಸಂಬಂಧ ಹಿಂದೂ ಸಂಘಟನೆಗಳು ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮಕೈಗೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ 2021ರ ಕ್ರಿಕೆಟ್ ಟಿ20 ವಿಶ್ವಕಪ್‍ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ಜಯಗಳಿಸಿತ್ತು. ಈ ವೇಳೆ ಕಾಶ್ಮೀರಿ ವಿದ್ಯಾರ್ಥಿಗಳು ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ್ದರು ಎಂದು ಹಲ್ಲೆಗೊಳಗಾದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ: ಗೆಹ್ಲೋಟ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್