ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajinikanth) ಇದೀಗ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಲಾಲ್ ಸಲಾಮ್ (Lal Salaam) ಹೆಸರಿನಲ್ಲಿ ಇವರು ಚಿತ್ರ ಮಾಡುತ್ತಿದ್ದು, ಈ ಸಿನಿಮಾದಲ್ಲಿ ರಜನಿಕಾಂತ್ ಕೂಡ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸಿನಿಮಾದ ನಿರ್ಮಾಪಕರೇ ಘೋಷಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.
ಲಾಲ್ ಸಲಾಮ್ ಸಿನಿಮಾದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ನಾಯಕರಾಗಿ ನಟಿಸುತ್ತಿದ್ದು, ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಲೈಕಾ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಶ್ರೀಧರ್ ಪಿಲ್ಲೈ ಅವರು ಚಿತ್ರಕ್ಕೆ ಹಣ ಹೂಡಿದ್ದಾರೆ. ಅವರೇ ಟ್ವಿಟ್ ಮೂಲಕ ತಮ್ಮ ಸಿನಿಮಾದಲ್ಲಿ ರಜನಿಕಾಂತ್ (Rajinikanth) ವಿಶೇಷ ಪಾತ್ರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ವಿಜಯ್ ದೇವರಕೊಂಡ- ರಶ್ಮಿಕಾ
ಇದೊಂದು ಕ್ರಿಕೆಟ್ ಹಿನ್ನೆಲೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿಯೇ ಕ್ರಿಕೆಟ್ ಬಲ್ಲಂತಹ ನಟರಾದ ವಿಕ್ರಾಂತ್ (Vikrant) ಮತ್ತು ವಿಷ್ಣು ವಿಶಾಲ್ (Vishnu Vishal) ಅವರನ್ನು ಆಯ್ಕೆ ಮಾಡಿಕೊಂಡಿದ್ದಾರಂತೆ. ಈ ಇಬ್ಬರೂ ಕಲಾವಿದರು ಉತ್ತಮ ಕ್ರಿಕೆಟ್ ಪಟುಗಳು ಎನ್ನುವುದು ವಿಶೇಷ. ಈ ಸಿನಿಮಾದಲ್ಲಿ ಇನ್ನೂ ಹಲವು ಅಚ್ಚರಿಯ ವಿಷಯಗಳಿದ್ದು, ಅವುಗಳನ್ನು ಮುಂದಿನ ದಿನಗಳಲ್ಲಿ ಹೇಳುವುದಾಗಿಯೂ ನಿರ್ಮಾಣ ಸಂಸ್ಥೆ ತಿಳಿಸಿದೆ.