ರಾಜ್ಯಸಭೆಯಲ್ಲಿ ಐತಿಹಾಸಿಕ ನಿರ್ಣಯ – ಸರ್ವಾನುಮತದಿಂದ ಮಹಿಳಾ ಮೀಸಲಾತಿ ಬಿಲ್‌ ಪಾಸ್‌

Public TV
1 Min Read

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಅಂಗೀಕಾರಗೊಂಡ ನಾರಿಶಕ್ತಿ ವಂದನ್ ಅಧಿನಿಯಮ್ ವಿಧೇಯಕಕ್ಕೆ ರಾಜ್ಯಸಭೆಯೂ (Rajya Sabha) ಒಪ್ಪಿಗೆ ನೀಡಿತು. 215 ಮತಗಳ ಮೂಲಕ ವಿಧೇಯಕವನ್ನು ಅವಿರೋಧವಾಗಿ ಅಂಗೀಕಾರವಾಗಿದೆ. ಈ ಮೂಲಕ ಮಂಡನೆಯಾದ ಮೊದಲ ಮಸೂದೆ ಅವಿರೋಧವಾಗಿ ಪಾಸ್‌ (Rajya Sabha Passed Unanimously) ಆಗುವ ಮೂಲಕ ರಾಜ್ಯಸಭೆ ದಾಖಲೆ ನಿರ್ಮಿಸಿದೆ.

ಮಹಿಳಾ ಮೀಸಲಾತಿ ಕಾಯ್ದೆ (Womens Reservation Bill) ಜಾರಿಯಾದರೆ ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33 ರಾಜಕೀಯ ಮೀಸಲಾತಿ ದೊರೆಯಲಿದೆ. ಇದನ್ನೂ ಓದಿ: ಶಿವಶಕ್ತಿ ಬಿಂದುವಿನಲ್ಲಿ ಲ್ಯಾಂಡರ್, ರೋವರ್ – ವಿಕ್ರಮ್, ಪ್ರಗ್ಯಾನ್‌ಗೆ ಸಿಗುತ್ತಾ ಮರುಜೀವ?

`ನಾರಿ ಶಕ್ತಿ ವಂದನ್ ಅಧಿನಿಯಮ್’ ಎಂದು ಕರೆಯಲಾಗುವ ಮಹಿಳಾ ಮೀಸಲಾತಿ ವಿಧೇಯಕವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ (Arjun Ram Meghwal) ಅವರು ಗುರುವಾರ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ಮಂಡಿಸಿದರು. ರಾಜ್ಯಸಭೆಯಲ್ಲೂ ಈ ವಿಧೇಯಕದ ಕುರಿತು ಕಾಂಗ್ರೆಸ್ ಸಂಸದ, ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರು ಮಾತನಾಡಿದರು.

ಲೋಕಸಭೆಯಲ್ಲಿ ಪಾಸ್ ಮಾಡಿರುವ ಮಹಿಳಾ ಮೀಸಲು ವಿಧೇಯಕದಲ್ಲಿ ಇತರ ಹಿಂದುಳಿದ ವರ್ಗದ ಮಹಿಳೆಯರು, ಎಸ್ ಸಿ, ಎಸ್ ಟಿ ಕೆಟಗರಿಯ ಮಹಿಳೆಯರಿಗೂ ಮೀಸಲು ಕಲ್ಪಿಸಬೇಕು ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಒತ್ತಾಯಿಸಿದವು. ಇದನ್ನೂ ಓದಿ: ಗಗನಯಾತ್ರಿಗಳ ಮೈಕ್ರೋಮೀಟೋರಾಯ್ಡ್ ದಿರಿಸುಗಳ ಕೌತುಕ ಲೋಕದ ಬಗ್ಗೆ ನಿಮಗೆ ಗೊತ್ತಾ? 

2024ರಲ್ಲೇ ಮಹಿಳಾ ಮೀಸಲಾತಿ ಜಾರಿಗೆ ತರಬೇಕು ಎಂದು ಐಎನ್‌ಡಿಐಎ ಕೂಟ ಒತ್ತಾಯಿಸಿತು. ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಮಹಿಳಾ ಮೀಸಲಾತಿ ಬಿಲ್ ಬೆಂಬಲಿಸಿ ಮಾತನಾಡಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್