ಮತ್ತೆ ಮುಂದಕ್ಕೆ ಹೋಗುತ್ತಾ ರಕ್ಷಿತ್ ಶೆಟ್ಟಿ ನಟನೆಯ ಸಿನಿಮಾ

Public TV
2 Min Read

ಪ್ತಸಾಗರದಾಚೆ ಎಲ್ಲೋ ಸಿನಿಮಾದ ರಿಲೀಸ್ (, Released)ಡೇಟ್ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಆದರೆ, ನಿಗದಿತ ದಿನಾಂಕದಲ್ಲಿ ಸಿನಿಮಾ ರಿಲಿಸ್ ಆಗುತ್ತಿಲ್ಲ ಚಿತ್ರತಂಡವೇ ಹೇಳಿಕೊಂಡಿತ್ತು.

ಈ ವೇಳೆಯಲ್ಲಿ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಒಂದು ವಾರ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದರು. ಅಕ್ಟೋಬರ್ 27ಕ್ಕೆ ಗ್ರ್ಯಾಂಡ್ ಆಗಿ ಸಪ್ತ ಸಾಗರದಾಚೆ ಎಲ್ಲೋ ಬಿ ಪಾರ್ಟ್ ಬಿಡುಗಡೆ ಆಗಲಿದೆ ಎಂದು ನಿಗದಿ ಆಗಿತ್ತು. ಇದೀಗ ಅದು ಕೂಡ ಮುಂದೆ ಹೋಗಿದೆ ಎಂದು ಹೇಳಲಾಗುತ್ತಿದೆ. ನವೆಂಬರ್ 10ಕ್ಕೆ ಬಿಡುಗಡೆ ಪ್ಲ್ಯಾನ್ ಮಾಡಲಾಗುತ್ತಿವೆ ಎನ್ನುತ್ತವೆ ಮೂಲಗಳು. ಆದರೆ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಚಿತ್ರತಂಡದಿಂದ ಬಂದಿಲ್ಲ.

ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದಾರೆ.

 

ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದಾರೆ. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್