ನ್ಯಾಷನಲ್ ಸ್ಟಾರ್ ಯಶ್ ಸಹ ನಿರ್ಮಾಪಕನಾಗಿ ಕೈಜೋಡಿಸಿರುವ ‘ರಾಮಾಯಣ’ ಸಿನಿಮಾತಂಡ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ರಾಮನಾಗಿ ರಣ್ಬೀರ್ ಕಪೂರ್ (Ranbir Kapoor) ಮತ್ತು ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ಲಂಕಾಧೀಶ ರಾವಣನ ಸಹೋದರಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ.
ಕನ್ನಡದ ‘ಗಿಲ್ಲಿ’ ಚಿತ್ರದ ಮೂಲಕ ಬಣ್ಣದ ಹಚ್ಚಿದ ನಟಿ ರಕುಲ್ ತೆಲುಗು ಸಿನಿಮಾಗಳ ನಂತರ ಬಾಲಿವುಡ್ನಲ್ಲಿ ಸ್ಟಾರ್ ನಟರ ಜೊತೆ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡರು. ಇದೀಗ ರಾಮಾಯಣ ಸಿನಿಮಾದ ಆಫರ್ ಸಿಕ್ಕಾಗ ಸೂಕ್ತ ಅವಕಾಶ ಎನಿಸಿ ನಟಿ ಓಕೆ ಎಂದಿದ್ದಾರೆ. ಸದ್ಯದಲ್ಲೇ ಶೂಟಿಂಗ್ನಲ್ಲಿ ರಕುಲ್ ಭಾಗಿಯಾಗಲಿದ್ದಾರೆ.
ಅಂದಹಾಗೆ, ಇತ್ತೀಚೆಗೆ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆ ಬಳಿಕವೂ ನಟಿ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ.