ಜ.22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ: ನೃಪೇಂದ್ರ ಮಿಶ್ರಾ

Public TV
1 Min Read

ಲಕ್ನೋ: ಅಯೋಧ್ಯೆ ರಾಮ ಮಂದಿರದ (Ram Mandir) ನೆಲ ಮಹಡಿಯ ನಿರ್ಮಾಣ ಕಾಮಗಾರಿ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಜನವರಿ 22 ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ (Nripendra Mishra) ತಿಳಿಸಿದ್ದಾರೆ.

ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾಗವಹಿಸಲಿದ್ದಾರೆ. ಪ್ರತಿಷ್ಠಾಪನೆಯ ಅಂತಿಮ ದಿನಾಂಕವನ್ನು ಮೋದಿ ಅವರಿಗೆ ಇನ್ನೂ ತಿಳಿಸಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು – ಮತ್ತೆ ಇಂಟರ್‌ನೆಟ್ ಸ್ಥಗಿತ

ಜನವರಿ 14 ರಂದು ಮಕರ ಸಂಕ್ರಾಂತಿಯ ನಂತರ ರಾಮಲಲ್ಲಾನ ಪವಿತ್ರೀಕರಣವನ್ನು ಪ್ರಾರಂಭಿಸಲು ಮಂದಿರ ಟ್ರಸ್ಟ್ ನಿರ್ಧರಿಸಿದೆ. ಅದರ ನಂತರ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ.

ಜೂನ್‌ನಲ್ಲಿ ರಾಮ ಮಂದಿರ ಟ್ರಸ್ಟ್ ಸದಸ್ಯ ಮಿಶ್ರಾ ಅವರು, ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಮುಂದಿನ ವರ್ಷ ಜನವರಿ 24 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭಕ್ತರಿಗೆ ತೆರೆಯುವ ಸಾಧ್ಯತೆಯಿದೆ ಎಂದು ಹೇಳಿದ್ದರು. ಇದನ್ನೂ ಓದಿ: ನನ್ನನ್ನು ಥಳಿಸಿ ಪಿಎಫ್‍ಐ ಅಂತ ಬರೆದಿದ್ದಾರೆ – ಕಥೆ ಕಟ್ಟಿದ ಯೋಧ ಅರೆಸ್ಟ್!

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್