ಆನೇಕಲ್: ಖಾಸಗಿ ಆಸ್ಪತ್ರೆಯ ಉದ್ಘಾಟನೆ ವೇಳೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) 10 ನಿಮಿಷಗಳ ಕಾಲ ಲಿಫ್ಟ್‌ನಲ್ಲಿ (Lift) ಸಿಲುಕಿದ ಘಟನೆ ರಾಜ್ಯ ಗಡಿಭಾಗ ತಮಿಳುನಾಡಿನ (Tamil Nadu) ಹೊಸೂರಿನಲ್ಲಿ (Hosur) ನಡೆದಿದೆ.
ಹೊಸೂರಿನ ಖಾಸಗಿ ಆಸ್ಪತ್ರೆಯ ಉದ್ಘಾಟನೆ ವೇಳೆ ಘಟನೆ ನಡೆದಿದೆ. ನೆಲಮಹಡಿಯಿಂದ ಲಿಫ್ಟ್‌ನಲ್ಲಿ ಹೋಗುವ ವೇಳೆ ಸಚಿವ ರಾಮಲಿಂಗಾರೆಡ್ಡಿ, ಹೊಸೂರು ಶಾಸಕ ಪ್ರಕಾಶ್ ಸೇರಿ ಸುಮಾರು ಹತ್ತು ಮಂದಿ ಇದ್ದ ಲಿಫ್ಟ್ ಕೆಟ್ಟು ನಿಂತು ಕೆಲಕಾಲ ಪರದಾಟ ನಡೆಸಿದರು. ಸುಮಾರು 10 ನಿಮಿಷಗಳ ಕಾಲ ಸಚಿವರು ಹಾಗೂ ಶಾಸಕರು ಲಿಫ್ಟ್‌ನಲ್ಲಿ ಸಿಲುಕಿದ್ದಾರೆ. ಇದನ್ನೂ ಓದಿ: ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ – ಓರ್ವ ಸಾವು, 29 ಮಂದಿಗೆ ಗಾಯ
ಘಟನೆಯಿಂದ ಕೆಲಹೊತ್ತು ಆಸ್ಪತ್ರೆಯ ಆವರಣ ಗೊಂದಲಕ್ಕೀಡಾಗಿತ್ತು. ಬಳಿಕ ಲಿಫ್ಟ್ ಆಪರೇಟರ್ ಸಹಾಯದಿಂದ ಡೋರ್ ಓಪನ್ ಮಾಡಲಾಯಿತು. ತದನಂತರ ರಾಮಲಿಂಗಾ ರೆಡ್ಡಿ ಆಸ್ಪತ್ರೆ ಉದ್ಘಾಟಿಸಿ ಅಲ್ಲಿಂದ ತೆರಳಿದ್ದಾರೆ. ಇದನ್ನೂ ಓದಿ: ರಾಯರು ಸಶರೀರರಾಗಿ ವೃಂದಾವನಸ್ಥರಾಗಿ ಇಂದಿಗೆ 354 ವರ್ಷ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ