ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ

Public TV
1 Min Read

– ಮೋದಿ ಸೇರಿದಂತೆ ಗಣ್ಯರಿಂದ ಸಂತಾಪ

ಹೈದರಾಬಾದ್: ಈನಾಡು ಮತ್ತು ರಾಮೋಜಿ ಫಿಲ್ಮ್ ಸಿಟಿ (Ramoji Film City) ಸಂಸ್ಥಾಪಕ ರಾಮೋಜಿ ರಾವ್ (87) ವಿಧಿವಶರಾಗದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ರಾಮೋಜಿ ರಾವ್ (Ramoji Rao) ಅವರು ಜೂನ್ 5 ರಂದು ಹೈದರಾಬಾದ್‍ನ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 4:50ರ ಸುಮಾರಿಗೆ ನಿಧನರಾಗಿದ್ದಾರೆ.

ವರದಿಗಳ ಪ್ರಕಾರ, ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲು ಸಿದ್ಧತೆಗಳು ನಡೆಯುತ್ತಿವೆ. ಅಲ್ಲಿ ಕುಟುಂಬದ ಸದಸ್ಯರು, ಸ್ನೇಹಿತರು ಮತ್ತು ಹಿತೈಷಿಗಳು ರಾಮೋಜಿ ರಾವ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಜನರ ಜ್ವಲಂತ ಸಮಸ್ಯೆ ಎತ್ತಿರೋ ರಾಹುಲ್‌ ಗಾಂಧಿಯವ್ರೇ ಪ್ರತಿಪಕ್ಷ ನಾಯಕನಾಗಲಿ: ಪರಂ

ರಾಮೋಜಿ ರಾವ್ ಅವರ ನಿಧನಕ್ಕೆ ನರೇಂದ್ರ ಮೋದಿ , ಚಂದ್ರಬಾಬು ನಾಯ್ಡು ಹಾಗೂ ರೇವಂತ್‌ ರೆಡ್ಡಿ ಸೇರಿದಂತೆ ಹಲವು ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ. ರಾಮೋಜಿ ರಾವ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಕೊಡುಗೆ ಪತ್ರಿಕೋದ್ಯಮ ಮತ್ತು ಚಲನಚಿತ್ರ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾಗಿ ಉತ್ಸುಕರಾಗಿದ್ದರು. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಜ್ಞಾನದಿಂದ ಪ್ರಯೋಜನ ಪಡೆಯಲು ಅನೇಕ ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮೋದಿ ಬರೆದುಕೊಂಡಿದ್ದಾರೆ.

Share This Article