ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ

Public TV
2 Min Read

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ನಟ ಕಮಲ್ ಹಾಸನ್ (Kamal Haasan) ಪರವಾಗಿ ಮಾಜಿ ಸಂಸದೆ, ನಟಿ ರಮ್ಯಾ (Actress) ಬ್ಯಾಟ್ ಬೀಸಿದ್ದಾರೆ.

ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನ ಹಂಚಿಕೊಂಡಿದ್ದಾರೆ. ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಎಲ್ಲವೂ ದ್ರಾವಿಡ ಭಾಷೆಗಳ ಒಂದೇ ಕೊಡಿಯಡಿಯಲ್ಲಿ ಬರುತ್ತವೆ. ಆದ್ರೆ ನಮ್ಮಲ್ಲಿನ ಕೆಲವು ಸಾಮಾನ್ಯತೆ ಮತ್ತು ಹಂಚಿಕೆಯಾಗಿರುವ ಭಾಷಾ ವಂಶಾವಳಿ ಬೇರೆ ಇರಬಹುದು. ಅವರೆಡೂ ಶ್ರೇಷ್ಠವಲ್ಲ. ಸಂಸ್ಕೃತ ಎಲ್ಲಾ ಭಾಷೆಗಳ ತಾಯಿ ಎಂದು ಭಾವಿಸುವವರಿಗೆ ನೀವು ಕೂಡ ತಪ್ಪಾಗಿ ಕಾಣಿಸಿಸುತ್ತಿದ್ದೀರಿ. ಏಕೆಂದರೆ ಸಂಸ್ಕೃತ ಇಂಡೋ – ಆರ್ಯನ್‌ ಭಾಷೆ. ನಾವು ದ್ರಾವೀಡರು, ಎರಡೂ ಪಸ್ಪರ ಭಿನ್ನ. ಕಮಲ್ ಹಾಸನ್ ಅವರು ತಪ್ಪು ಮಾಡಿದ್ದಾರೆ? ಆದ್ರೆ ಚಿತ್ರವನ್ನ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಹಿಂದಿ ಹೇರಿಕೆಯ ವಿರುದ್ಧ ನಾವು ಒಂದಾಗಬೇಕು. ಅದಕ್ಕಾಗಿ ನಾವು ಮೊದಲು ಪರಸ್ಪರ ಗೌರವಿಸುವದನ್ನು ಕಲಿಯಬೇಕು ಎಂದು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಚಾರ್ಟ್‌ ಸಮೇತ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ

ಇನ್ನೂ ತಮಿಳಿನಿಂದ ಕನ್ನಡ ಹುಟ್ಟಿದೆ ಅನ್ನೋ ಕಮಲ್ ಹಾಸನ್ ವಿವಾದದಲ್ಲಿ ತಮಿಳುನಾಡಿನ ರಾಜಕಾರಣಿಗಳು ಮೂಗು ತೂರಿಸ್ತಿದ್ದಾರೆ. ವಿಸಿಕೆ ಪಕ್ಷದ ಮುಖ್ಯಸ್ಥ ತಿರುಮಾವಳವನ್, ತಮಿಳು ದ್ರಾವಿಡ ಭಾಷೆಯ ತಾಯಿ, ಈಗಾಗಲೇ ಇತಿಹಾಸದಿಂದ ಸಾಬೀತಾಗಿದೆ. ಇತಿಹಾಸ ತಜ್ಞರು ಕೂಡ ಇದನ್ನು ಸಾಬೀತುಪಡಿಸಿದ್ದಾರೆ. ಕಮಲ್‌ ಹಾಸನ್ ಹೇಳಿರೋ ಮಾತನ್ನು ಕನ್ನಡಿಗರು ಹಾಗೂ ಮಲಯಾಳಿಗಳು ಒಪ್ಪುತ್ತಿಲ್ಲ. ತಮಿಳು ಎಲ್ಲ ಭಾಷೆಗಳ ತಾಯಿ ಅನ್ನೋದು ಇತಿಹಾಸ. ಇದು ಸತ್ಯ ಅಂತ ತುಪ್ಪ ಸುರಿದಿದ್ದಾರೆ. ಇದನ್ನೂ ಓದಿ: ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ ಎಂದ ನಟ

ಆದರೆ, ಕಮಲ್ ಹಾಸನ್ ದುರಂಹಕಾರಿ, ವಿಷಬೀಜ ಬಿತ್ತುತ್ತಿದ್ದಾರೆ ಅಂತ ವಿಜಯೇಂದ್ರ ಖಂಡಿಸಿದ್ರೆ, ಕ್ಷಮೆ ಕೇಳಲೇಬೇಕು ಅಂತ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಸಿಟಿ ರವಿ ಕೂಡ ನಾವೆಲ್ಲಾ ಒಂದೇ ತಾಯಿಯ ಮಕ್ಕಳು ಅಂತ ಗೌರವ ಕೊಟ್ಟಿದ್ದೇವೆ ಅಂದಿದ್ದಾರೆ. ಇದನ್ನೂ ಓದಿ: ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ

Share This Article