ರಮ್ಯಾ ಆರೋಗ್ಯವಾಗಿದ್ದಾರೆ- ಸುಳ್ಳು ವದಂತಿಗೆ ನಟಿಯ ಆಪ್ತರಿಂದ ಸ್ಪಷ್ಟನೆ

By
1 Min Read

ವಿದೇಶ ಪ್ರವಾಸದಲ್ಲಿರುವ ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ (Sandalwood Queen Ramya) ಕ್ಷೇಮವಾಗಿದ್ದಾರೆ. ನಟಿಯ ಆರೋಗ್ಯದ (Ramya Health) ಬಗ್ಗೆ ಸುಳ್ಳು ವದಂತಿಗಳನ್ನು ಹಬ್ಬಿಸಬೇಡಿ ಎಂದು ಅವರ ಆಪ್ತರು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಕುಡಿದು ಬೈಕ್ ಸವಾರನೇ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ: ಚಂದ್ರಪ್ರಭಾ

ನಟಿ ರಮ್ಯಾ ಅವರು ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುಳ್ಳು ಸುದ್ದಿ ವೈರಲ್ ಆಗಿತ್ತು. ಈ ಸುದ್ದಿ ದೊಡ್ಡ ಮಟ್ಟದಲ್ಲಿ ವೈರಲ್ ಆಗುತ್ತಿದ್ದಂತೆ ರಮ್ಯಾ ಸ್ನೇಹಿತೆಯರು ಸ್ಪಷ್ಟನೆ ನೀಡಿದ್ದಾರೆ. ರಮ್ಯಾ ಆರೋಗ್ಯವಾಗಿದ್ದಾರೆ, ಕ್ಷೇಮವಾಗಿದ್ದಾರೆ. ನಾಳೆಯೇ ವಿದೇಶದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಕ್ಲ್ಯಾರಿಟಿ ನೀಡಿದ್ದಾರೆ.

ನಟಿ ರಮ್ಯಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ತಮಿಳು ಕಿರುತೆರೆ ನಟಿ ರಮ್ಯಾಗೆ ಹೃದಯಾಘಾತವಾಗಿದೆ. ಈ ಸುದ್ದಿಗೆ ಸ್ಯಾಂಡಲ್‍ವುಡ್ ನಟಿ ರಮ್ಯಾ ಫೋಟೋ ಹಾಕಿ ನ್ಯೂಸ್ ಮಾಡಲಾಗಿತ್ತು. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಯಿತು. ಕೂಡಲೇ ರಮ್ಯಾ ಆಪ್ತರು ನಟಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇತ್ತ ಸೋಶಿಯಲ್ ಮೀಡಿಯಾದಲ್ಲಿಯೂ ರಮ್ಯಾ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂಬ ಪೋಸ್ಟ್ ಅನ್ನು ವೈರಲ್ ಮಾಡಲಾಗುತ್ತಿದೆ. ಸದ್ಯ ರಮ್ಯಾ ಬಗೆಗಿನ ಸುಳ್ಳು ಸುದ್ದಿ ಕೇಳಿ ಶಾಕ್ ಆಗಿದ್ದ ಫ್ಯಾನ್ಸ್ ಈಗ ನಿರಾಳವಾಗಿದ್ದಾರೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್