ಗುಂಟೂರು ಖಾರ ಸವಿಯಲು ಬರುತ್ತಿದ್ದಾರೆ ರಮ್ಯಾ ಕೃಷ್ಣ

Public TV
2 Min Read

ಹೇಶ್ ಬಾಬು (Mahesh Babu) ನಟನೆಯ ಗುಂಟೂರು ಖಾರಂ ಸಿನಿಮಾದಲ್ಲಿ ಹಾಟ್ ಬ್ಯೂಟಿ ರಮ್ಯಾ ಕೃಷ್ಣ (Ramya Krishna) ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ. ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿನಿ ಪಾತ್ರ ಮಾಡಿದ್ದ ರಮ್ಯಾ ಕೃಷ್ಣ ಅಲ್ಲಿಂದ ಅವರು ಮತ್ತೆ ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಮಹೇಶ್ ಬಾಬು ಸಿನಿಮಾವನ್ನು ರಮ್ಯಾ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರಿಗಾಗಿಯೇ ಪಾತ್ರವನ್ನು ಹಿಗ್ಗಿಸಿದ್ದಾರಂತೆ ಚಿತ್ರತಂಡ.

ಕಲಾವಿದರ ವಿಚಾರದಲ್ಲಿ ಈ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಕರಾವಳಿ ಬ್ಯೂಟಿ ಪೂಜಾ ಹೆಗ್ಡೆ ‘ಗುಂಟೂರು ಖಾರಂ’ (Guntur Kharam) ಪ್ರಾಜೆಕ್ಟ್‌ನಿಂದ ಹೊರಬಂದಿದ್ದಾರೆ. ಎಂದು ಹೇಳಲಾಗುತ್ತಿದೆ.  ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇ ಪದೇ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು ಬರುವ ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗಲ್ಲ ಎನ್ನುವ ವಾದ ಶುರುವಾಗಿದೆ. ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್‌ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ಪೂಜಾ ಹೆಗ್ಡೆಗೆ ಈಗ ಡೇಟ್ಸ್ ಸಮಸ್ಯೆ ಎದುರಾಗಿದೆ.

ಕಳೆದ ವರ್ಷ ಈ ಚಿತ್ರಕ್ಕಾಗಿ ಕಾಲ್‌ಶೀಟ್ ಕೊಟ್ಟಿದ್ದರು. ಆದರೆ ಈವರೆಗೆ ಚಿತ್ರೀಕರಣ ಮುಗಿದಿಲ್ಲ. ಈ ವರ್ಷ ಜೂನ್‌ನಿಂದ ಡಿಸೆಂಬರ್‌ವರೆಗೆ ಬೇರೆ ಸಿನಿಮಾಗಳಿಗೆ ಕಾಲ್‌ಶೀಟ್ ಕೊಟ್ಟಿದ್ದಾರಂತೆ. ಆ ಸಿನಿಮಾಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಮಹೇಶ್ ಬಾಬು ಚಿತ್ರದಿಂದ ಹೊರ ಬರುವ ನಿರ್ಧಾರ ಮಾಡಿದ್ದಾರೆ. ಈಗಾಗಲೇ ಶೂಟ್‌ ಮಾಡಿದ ಭಾಗ ಮಹೇಶ್‌ ಬಾಬು ಅವರಿಗೆ ತೃಪ್ತಿ ಸಿಗದ ಕಾರಣ ಮತ್ತೊಮ್ಮೆ ರೀ-ಶೂಟ್‌ ಮಾಡಲಾಗುತ್ತಿದೆ. ಹಾಗಾಗಿ ಡೇಟ್‌ ಸಮಸ್ಯೆಯಿಂದ ಪೂಜಾ ಸಿನಿಮಾಗೆ ಬೈ ಬೈ ಹೇಳಿದ್ದಾರೆ. ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು

ಸದ್ಯ ಚಿತ್ರದಿಂದ ಪೂಜಾ ಹೆಗ್ಡೆ ಹೊರನಡೆದಿದ್ದಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಇದರ ನಡುವೆ ತ್ರಿಷಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿಯನ್ನು ಕೆಲವರು ತೇಲಿಬಿಟ್ಟಿದ್ದಾರೆ. ಈ ಹಿಂದೆ ಮಹೇಶ್ ಬಾಬು ಹಾಗೂ ತ್ರಿಷಾ ‘ಅತಡು’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಆ ಚಿತ್ರಕ್ಕೂ ತ್ರಿವಿಕ್ರಮ್ ಆಕ್ಷನ್ ಕಟ್ ಹೇಳಿದ್ದರು. ‘ಪೊನ್ನಿಯಿನ್ ಸೆಲ್ವನ್’ 2 (Ponniyin Selvan 2) ಸರಣಿ ಚಿತ್ರದಿಂದ ತ್ರಿಷಾ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ.

 

‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬುಗೆ ನಾಯಕಿಯರಾಗಿ ಪೂಜಾ ಹೆಗ್ಡೆ, ಶ್ರೀಲೀಲಾ ಸ್ಕ್ರೀನ್  ಶೇರ್ ಮಾಡಿದ್ದರು. ಅರ್ಧ ಭಾಗ ಚಿತ್ರೀಕರಣ ಮುಗಿದಿರೋ ಬೆನ್ನಲ್ಲೇ ಪೂಜಾ ಹೆಗ್ಡೆ ಹೊರನಡೆದಿದ್ದಾರೆ. ತ್ರಿಷಾ, ಶ್ರೀಲೀಲಾ ಲೀಡ್ ನಾಯಕಿಯರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

Share This Article