ನೇಹಾ ಕರ್ನಾಟಕದ ಪುತ್ರಿ.. ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು: ಕಾಂಗ್ರೆಸ್‌ನ ರಣದೀಪ್‌ ಸುರ್ಜೇವಾಲಾ

By
2 Min Read

– ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕೀಯ ಮಾಡಬೇಡಿ ಎಂದು ಬಿಜೆಪಿಗೆ ತಿರುಗೇಟು
– ನೇಹಾ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕಾಂಗ್ರೆಸ್‌ ನಾಯಕರು

ಹುಬ್ಬಳ್ಳಿ: ನೇಹಾ (Neha Hiremath) ಹತ್ಯೆ ನಡೆದು ಒಂದು ವಾರವಾಗಿದ್ದು, ಕೊನೆಗೂ ಕಾಂಗ್ರೆಸ್ ಹಿರಿಯ ವರಿಷ್ಠರು ಕೊನೆಗೂ ನೇಹಾ ಮನೆಗೆ ಭೇಟಿ ನೀಡಿ ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ. ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Surejewala), ಸಚಿವರಾದ ಹೆಚ್.ಕೆ.ಪಾಟೀಲ್, ಸಂತೋಷ್ ಲಾಡ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್.ಹೆಚ್.ಕೋನರೆಡ್ಡಿ ಅವರು ನೇಹಾ ಮನೆಗೆ ಭೇಟಿ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸುರ್ಜೇವಾಲಾ, ಈ ಮನೆ ಹೊರತುಪಡಿಸಿ ನೀವು ರಾಜಕಾರಣ ಮಾಡಿ. ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ನೇಹಾ ಕೊಲೆ ಆರೋಪಿ ಫಯಾಜ್‍ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಸಿಐಡಿ

ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ್ ಹಿರೇಮಠ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ್ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರ್ತೇವೆ. ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ ಎಂದರು.

ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕು. 90 ದಿನಗಳಲ್ಲಿ ನ್ಯಾಯದಾನ ಸಿಗಲಿದೆ ಎನ್ನುವ ವಿಶ್ವಾಸವಿದೆ. ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತಾ ತ್ವರಿತ ನ್ಯಾಯದಾನ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ. ಈ ಮನೆ ಹೊರತುಪಡಿಸಿ ರಾಜಕೀಯ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಮಾತನಾಡಿ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತಾ ನ್ಯಾಯ ಸಿಗಲಿದೆ ಎನ್ನುವ ಖಾತ್ರಿ ಇದೆ ಎಂದರು.

Share This Article