ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ

Public TV
1 Min Read

ಬಳ್ಳಾರಿ: ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ (Gold Smuggling Case) ಬಗೆದಷ್ಟು ಬಯಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯ ಬಂಧನವಾಗಿದೆ.

ಬಳ್ಳಾರಿ (Ballari) ಮೂಲದ ಸಾಹಿಲ್ ಜೈನ್ (Sahil Jain) ಬಂಧಿತ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಲಾಕ್ ಆಗಿದ್ದಾನೆ. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಅಂಗಡಿ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ ಸಾಹಿಲ್ ಜೈನ್ ಕುಟುಂಬ ಬೆಂಗಳೂರಿಗೆ ಶಿಫ್ಟ್ ಆಗಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ – ಬಾಲಕಿ 6 ತಿಂಗಳ ಗರ್ಭಿಣಿ

ಸಾಹಿಲ್ ಚಿಕ್ಕಂದಿನಿಂದಲೇ ಸೋದರ ಮಾವನ ಜೊತೆಯಲ್ಲಿ ಮುಂಬೈನಲ್ಲಿ ವಾಸ ಮಾಡುತ್ತಿದ್ದ. ಈಗಾಗಲೇ ಇದೇ ರೀತಿಯ ಪ್ರಕರಣದಲ್ಲಿ ಸಾಹಿಲ್ ಮುಂಬೈನಲ್ಲಿ ಒಮ್ಮೆ ಬಂಧನಕ್ಕೆ ಒಳಗಾಗಿದ್ದ. ಕಸ್ಟಮ್ಸ್ ಅಧಿಕಾರಿಗಳು ಮುಂಬೈ ಏರ್ಪೋರ್ಟ್ನಲ್ಲಿ ಬಂಧಿಸಿದ್ದರು. ಈಗಿನ ಪ್ರಕರಣ ಮತ್ತು ಹಿಂದಿನ ಪ್ರಕರಣದಲ್ಲಿ ಚಿನ್ನವನ್ನು ಮಾರಾಟ ಮಾಡುತ್ತಿದ್ದ ಹಾಗೂ ಹವಾಲಾ ನಂಟಿನ ಆರೋಪದಲ್ಲಿಯೇ ಸಾಹಿಲ್ ಜೈನ್ ಬಂಧಿತನಾಗಿದ್ದ. ಚಿನ್ನದ ವ್ಯಾಪಾರಿಗಳ ಜೊತೆ ನಂಟು ಇರೋ ಹಿನ್ನೆಲೆ ಚಿನ್ನದ ಮಾರಾಟದ ಜವಾಬ್ದಾರಿಯೂ ಸಾಹಿಲ್ ಮೇಲಿತ್ತು. ಸದ್ಯ ಸಾಹಿಲ್ ಜೈನ್ ವಶಕ್ಕೆ ಪಡೆದಿರುವ ಡಿಆರ್‌ಐ ಅಧಿಕಾರಿಗಳು ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್‌ಗೂ ನೋಟೀಸ್ ಕೊಟ್ಟಿದ್ದಾರೆ. ಇದನ್ನೂ ಓದಿ: Uttar Pradesh | ಪತ್ನಿಯ ಅಕ್ರಮ ಸಂಬಂಧ ತಿಳಿದು ಪ್ರಿಯಕರನೊಂದಿಗೇ ಮದ್ವೆ ಮಾಡಿಸಿದ ಪತಿ

Share This Article