ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಡಿಆರ್‌ಐ ಅಧಿಕಾರಿಗಳಿಂದ ರಾಮಚಂದ್ರ ರಾವ್ ವಿಚಾರಣೆ

Public TV
1 Min Read

– ಮತ್ತೆ ನೋಟಿಸ್ ನೀಡಲು ತಯಾರಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ (Ranya Rao Gold Smuggling Case) ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ಕಾಫಿಪೋಸಾ ಕಾಯ್ದೆಯಡಿ ಜೈಲು ಸೇರಿರೋ ರನ್ಯಾರಾವ್ ವಿರುದ್ಧ ಡಿಆರ್‌ಐ ತನ್ನ ತನಿಖೆಯನ್ನು ಮುಂದುವರೆಸಿದೆ. ಇದು ಕೇವಲ ರನ್ಯಾರಾವ್‌ಗೆ ಮಾತ್ರ ಅಲ್ಲ ಅವರ ತಂದೆ ರಾಮಚಂದ್ರರಾವ್‌ಗೂ ಬಿಸಿ ತಟ್ಟಿದೆ.

ರಾಮಚಂದ್ರರಾವ್ ಅವರಿಗೆ ನೋಟಿಸ್ ಮಾಡಿದ್ದ ಡಿಆರ್‌ಐ (DRI) ಅಧಿಕಾರಿಗಳು ಒಂದೆರಡು ದಿನದ ಹಿಂದೆ ಅವರ ವಿಚಾರಣೆ ನಡೆಸಿದೆ. ಮ್ಯಾರಥಾನ್ ವಿಚಾರಣೆ ಮಾಡಿದ ಡಿಆರ್‌ಐ ಅಧಿಕಾರಿಗಳು ರನ್ಯಾರಾವ್‌ಗೆ ಮತ್ತು ರಾಮಚಂದ್ರರಾವ್‌ಗೆ ಇರೋ ಸಂಬಂಧ, ಚಿನ್ನ ಸಾಗಾಟ ಮಾಡೋ ಸಂದರ್ಭದಲ್ಲಿ ಸಹಾಯ ಮಾಡಲಾಗಿತ್ತಾ? ಪ್ರೋಟೋ ಕಾಲ್ ದುರ್ಬಳಕೆ ಮಾಡಿಕೊಂಡಿದ್ದರ ಬಗ್ಗೆ, ಜೊತೆಗೆ ಎರಡೇ ತಿಂಗಳಲ್ಲಿ 20ಕ್ಕೂ ಹೆಚ್ಚು ಬಾರಿ ದುಬೈಗೆ ಹೋಗಿ ಬಂದ ವಿಚಾರವನ್ನು ಸವಿರವಾಗಿ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್‌

ಆದರೆ ಮೂಲಗಳ ಮಾಹಿತಿ ಪ್ರಕಾರ, ಇವೆಲ್ಲಾ ಆರೋಪವನ್ನು ರಾಮಚಂದ್ರರಾವ್ ತಳ್ಳಿ ಹಾಕಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಡಿಆರ್‌ಐ ಮತ್ತೆ ನೋಟಿಸ್ ನೀಡಲು ತಯಾರಿ ನಡೆಸಿದೆ. ಇದನ್ನೂ ಓದಿ: ಟೈರ್ ಬ್ಲಾಸ್ಟ್ ಆಗಿ ಕಾಂಪೌಂಡ್ ಗೋಡೆಗೆ ಖಾಸಗಿ ಬಸ್ ಡಿಕ್ಕಿ – 10 ಮಂದಿಗೆ ಗಂಭೀರ ಗಾಯ

Share This Article