ಮೈಸೂರಲ್ಲಿ ಬಲೂನ್ ಮಾರೋ ಹುಡ್ಗಿ ರೇಪ್ & ಮರ್ಡರ್ – ಕೊಳ್ಳೇಗಾಲದಲ್ಲಿ ಆರೋಪಿ ಅರೆಸ್ಟ್‌

Public TV
2 Min Read

– ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಮೈಸೂರು: ನಗರದಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದ ಆರೋಪಿಯನ್ನ ಕೊಳ್ಳೇಗಾಲದಲ್ಲಿ ಪೊಲೀಸರು ಪತ್ತೆಹಚ್ಚಿದ್ದಾರೆ.

ಕೃತ್ಯ ಎಸಗಿದ್ದ ವಿಕೃತ ಕಾಮುಕ ಮೈಸೂರಿನ ಖಾಸಗಿ ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಹೋಗಿದ್ದ. ಇತ್ತ ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ತನಿಖೆ ನಡೆಸುತ್ತಿದ್ದ ಪೊಲೀಸರು ಕೊಳ್ಳೇಗಾಲದಲ್ಲಿ ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.

ಆರೋಪಿ ಕಾಲಿಗೆ ಗುಂಡೇಟು:
ಬಾಲಕಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಮೈಸೂರಿಗೆ ಕರೆತರುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಳಿಕ ಕರೆತಂದು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.

ಏನಿದು ಘಟನೆ?
ಸಾಂಸ್ಕೃತಿಕ ನಗರದಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ ಅಂಡ್ ಮರ್ಡರ್ ಆಗಿದೆ. ಬಾಲಕಿಯ ದೇಹದ ಮೇಲೆ ಬಟ್ಟೆಯು ಇಲ್ಲದೆ ಶವ ಬಿದ್ದಿರುವ ಹಿನ್ನೆಲೆಯಲ್ಲಿ ಆರಂಭಿಕವಾಗಿ ಇದನ್ನು ಪೊಲೀಸರು ರೇಪ್ ಅಂಡ್ ಮರ್ಡರ್ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬ ಬಂದಿವೆ. ನಿನ್ನೆ ರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಅಪ್ರಾಪ್ತ ಬಾಲಕಿ ಮರ್ಡರ್ ಆಗಿದೆ. ಕೇವಲ ಎರಡೇ ದಿನಗಳ ಅಂತರದಲ್ಲಿ ಒಂದೇ ಜಾಗದಲ್ಲಿ ಎರಡು ಮರ್ಡರ್ ಆದಂತಾಗಿದೆ. 2 ದಿನಗಳ ಹಿಂದೆ ಇದೆ ಜಾಗದಲ್ಲಿ ರೌಡಿ ಶೀಟರ್‌ನ ಸಹರ್ವತಿಯ ಬರ್ಬರ ಹತ್ಯೆ ಆಗಿತ್ತು.

2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಆರೋಪಿ
ಅದೇ ಜಾಗದಲ್ಲಿ ನಿನ್ನೆ ರಾತ್ರಿ ಅಪ್ರಾಪ್ತ ಬಾಲಕಿ ಮರ್ಡರ್ ಆಗಿದೆ. ಸದ್ಯ ವಿಚಾರಣೆಗಾಗಿ ವ್ಯಾಪಾರಕ್ಕೆ ಆಗಮಿಸಿದ್ದ 50 ಹಕ್ಕಿಪಿಕ್ಕಿ ಕುಟುಂಬಸ್ಥರನ್ನು ಪೊಲೀಸರು ಕರೆದೊಯ್ದಿದ್ದಾರೆ. ಇನ್ನು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಎಂಬಾತನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 4 ತಿಂಗಳ ಹಿಂದಷ್ಟೇ ಈತ ಜೈಲಿನಿಂದ ಬಿಡುಗಡೆಯಾಗಿದ್ದ ಈತನನ್ನು ಕೊಳ್ಳೇಗಾಲದಲ್ಲಿ ಅರೆಸ್ಟ್ ಮಾಡಿದ್ದಾರೆ. ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ ಆರೋಪಿ, 2 ವರ್ಷ ಜೈಲು ಶಿಕ್ಷೆ ಅನುಭಿಸಿದ್ದ.

Share This Article