ಬೀದರ್: ಅತ್ಯಾಚಾರ ಆರೋಪ ಹೊತ್ತು ಬಂಧನ ಭೀತಿಯಲ್ಲಿದ್ದ ಬಿಜೆಪಿ ಶಾಸಕ ಪ್ರಭು ಚೌಹಾಣ್ (Prabhu Chauhan) ಪುತ್ರನಿಗೆ ಹೈಕೋರ್ಟ್ (High Court) ಜಾಮೀನು ಮಂಜೂರು ಮಾಡಿದೆ.
ಬೀದರ್ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪ್ರತೀಕ್ ಚೌಹಾಣ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ವಾದ-ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, 2 ಲಕ್ಷ ರೂ. ಬಾಂಡ್ ಶ್ಯೂರಿಟಿ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿದೆ. ಜೊತೆಗೆ ಪೊಲೀಸರು ಪ್ರಭು ಚೌಹಾಣ್ ಪುತ್ರನನ್ನು ಬಂಧನ ಮಾಡುವಂತಿಲ್ಲ ಎಂದು ಸೂಚಿಸಿದೆ.ಇದನ್ನೂ ಓದಿ: ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು
ಇನ್ನೂ ಈಗಾಗಲೇ ಬೀದರ್‌ನ ಮಹಿಳಾ ಠಾಣೆಯಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಅತ್ಯಾಚಾರ ಕೇಸ್ ವರ್ಗಾವಣೆ ಮಾಡಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ಬಿಜೆಪಿ ಶಾಸಕರ ಪುತ್ರನ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಕೇಸ್ ದಾಖಲಿಸಿದ್ದರು. ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.ಇದನ್ನೂ ಓದಿ: ಏರ್‌ಪೋರ್ಟ್ ಮಾದರಿಯಲ್ಲೇ ಇನ್ಮುಂದೆ ರೈಲಿಗೂ ಲಗೇಜ್ ಪಾಲಿಸಿ