ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲಾಗುವುದಿಲ್ಲ: ಮೇಘಾಲಯ ಹೈಕೋರ್ಟ್

Public TV
1 Min Read

ಶಿಲ್ಲಾಂಗ್: ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ. ಒಳ ಉಡುಗಳಿದ್ದಾಗಲೂ ಎಸಗುವ ಲೈಂಗಿಕ ದೌರ್ಜನ್ಯ ಅತ್ಯಾಚಾರಕ್ಕೆ ಸಮ ಎಂದು ಮೇಘಾಲಯ ಹೈಕೋರ್ಟ್‌ ಹೇಳಿದೆ.

ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ವಿಚಾರಣೆ ನಡೆಸಿ ನ್ಯಾಯಾಲಯ, ಅಪರಾಧಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 (ಬಿ) ಅಡಿಯಲ್ಲಿ ಆರೋಪ ಹೊರಿಸಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

10 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಡಬ್ಲ್ಯೂ.ಡಿಯೆಂಗ್ಡೊ ಅವರ ವಿಭಾಗೀಯ ಪೀಠವು, ಅಪರಾಧಿಗೆ ಶಿಕ್ಷೆ ವಿಧಿಸಿದ್ದ ಕೆಳ ಹಂತದ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ.

ಈ ಘಟನೆಯು 2006ರ ಸೆಪ್ಟೆಂಬರ್ 23ರಂದು ನಡೆದಿದೆ. ಒಂದು ವಾರದ ನಂತರ ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ ಬಾಲಕಿಯ ಖಾಸಗಿ ಭಾಗಗಳಲ್ಲಿ ನೋವು ಕಾಣಿಸಿಕೊಂಡಿತ್ತು. ತಾನು ಆಕೆಯ ಒಳ ಉಡುಪುಗಳನ್ನು ತೆಗೆದಿಲ್ಲ ಎಂದು ಆರೋಪಿ ಹೇಳಿದರೂ, ಲೈಂಗಿಕ ದೌರ್ಜನ್ಯಕ್ಕೆ ಸಾಕಷ್ಟು ಪುರಾವೆಗಳಿವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ‘ಜೇಮ್ಸ್’ ಸಿನಿಮಾ: ಅಭಿಮಾನಿಗಳ ಫಸ್ಟ್ ರಿಯ್ಯಾಕ್ಷನ್

jail

2018ರ ಅಕ್ಟೋಬರ್‌ 31ರಂದು ವಿಚಾರಣಾ ನ್ಯಾಯಾಲಯ, ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 25,000 ದಂಡ ವಿಧಿಸಿತ್ತು. ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅಪರಾಧಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಆದರೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

ಆ ಸಮಯದಲ್ಲಿ ತನಗೆ ಯಾವುದೇ ನೋವು ಕಾಣಿಸಲಿಲ್ಲ ಎಂದು ಸಂತ್ರಸ್ತೆ ಹೇಳಲು ಕಾರಣಗಳು ಏನೇ ಇರಲಿ, ವೈದ್ಯಕೀಯ ಪರೀಕ್ಷೆಗೆ ಒಳಗಾದಾಗ ಅವಳು ನೋವಿನ ಬಗ್ಗೆ ದೂರು ನೀಡಿದ್ದಳು. ವೈದ್ಯಕೀಯ ವರದಿಯು ಅದನ್ನೇ ದೃಢಪಡಿಸಿತು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರವಿವರ್ಮಾ ಸ್ಟಂಟ್‌ಗೆ ಪವರ್ ಸ್ಟಾರ್ ಫಿದಾ: ಫೋನ್ ಮಾಡಿ ಪುನೀತ್ ಹೇಳಿದ್ದೇನು?

Share This Article
Leave a Comment

Leave a Reply

Your email address will not be published. Required fields are marked *