– 10,000 ರೂ. ದಂಡ, ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡಲು ಆದೇಶ
ಚಿಕ್ಕೋಡಿ: ನಿಪ್ಪಾಣಿ (Nippani) ತಾಲೂಕಿನ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ (POCSO Act) ಪ್ರಕರಣ ದಾಖಲಿಸಿದ್ದು, ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ.
ಆಕಾಶ್ ಅಲಿಯಾಸ್ ಅಕ್ಷಯ್ ಮಹಾದೇವ್ಮ ಸಾಳುಂಕೆ ಶಿಕ್ಷೆಗೊಳಗಾದ ಅಪರಾಧಿ. ಈತ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿಯ ಬುದ್ಧನಗರದಲ್ಲಿ ವಾಸಿಸುತ್ತಿದ್ದ. 2019ರ ಆಗಸ್ಟ್ 18ರಂದು ನಿಪ್ಪಾಣಿಯಲ್ಲಿ ಆಕಾಶ್ ಸಾಳುಂಕೆ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂಬಂಧ, ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 55/2019ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ʻಬೆಂಕಿಯ ಬಲೆʼಯಲ್ಲಿ ನೇಪಾಳ – ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ
ಸಾಕ್ಷಿಗಳ ಹೇಳಿಕೆಗಳು ಮತ್ತು ಸಂಬಂಧಿತ ಕಾಂಕ್ರೀಟ್ ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ, ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ 2025ರ ಸೆಪ್ಟೆಂಬರ್ 4ರಂದು ತೀರ್ಪು ನೀಡಿದರು. ಅಪರಾಧಿ ವಿರುದ್ಧ ಐಪಿಸಿ ಸೆಕ್ಷನ್ 376 ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, 30 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದರು. ಇದನ್ನೂ ಓದಿ: ಮಂಗಳೂರು | ಬೈಕಂಪಾಡಿಯಲ್ಲಿ ಅಗ್ನಿ ಅವಘಡ – ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ