ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ – ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Public TV
1 Min Read

ರಾಯಚೂರು: ಚಾಕೊಲೇಟ್ (Chocolate) ಆಮಿಷವೊಡ್ಡಿ 11 ವರ್ಷದ ಅಪ್ರಾಪ್ತ (Minor) ಬಾಲಕಿಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ (Rape) ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಆರ್‌ಹೆಚ್ ಕ್ಯಾಂಪ್‌ನಲ್ಲಿ ನಡೆದಿದೆ.

ಸಪನ್ ಮಂಡಲ್ (52) ಅತ್ಯಾಚಾರ ಎಸಗಿರುವ ಆರೋಪಿ. ಈತ ಬಾಲಕಿಯ ಮನೆಯ ಪಕ್ಕದಲ್ಲೇ ವಾಸಿಸುತ್ತಿದ್ದು, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದಿದ್ದಾನೆ. ಬಳಿಕ ಆಕೆಗೆ ಸ್ಕೂಟರ್ ಕಲಿಸುವುದಾಗಿ ಗ್ರಾಮದ ಹೊರವಲಯಕ್ಕೆ ಕರೆದೊಯ್ದು ಜಮೀನಿನಲ್ಲಿ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿ ಕಣ್ಣೀರು ಹಾಕುತ್ತಾ ಮನೆಗೆ ಬಂದ ವೇಳೆ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಒಂಟಿ ಮಹಿಳೆ ಕೊಲೆ ಪ್ರಕರಣ – ಆರೋಪಿಯ ತಾಯಿಯಿಂದ ಆತ್ಮಹತ್ಯೆ ಯತ್ನ

ಸಂತ್ರಸ್ತ ಬಾಲಕಿ 4ನೇ ತರಗತಿ ಓದುತ್ತಿದ್ದು, ಆಕೆಯ ಪೋಷಕರು ಆರೋಪಿ ಸಪನ್ ಮಂಡಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ

Share This Article